ಧಾರವಾಡ: ‘ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಸಂಗೀತ, ನೃತ್ಯ, ನಾಟಕ ಕಲಿಯಬೇಕು’ ಎಂದು ರಂಗಸಮಾಜ ಸದಸ್ಯ ಎಸ್.ಜಹಾಂಗೀರ್ ಹೇಳಿದರು.

ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾ ಭವನದಲ್ಲಿ ಈಚೆಗೆ ನಡೆದ `ಅಭಿನಯ ಅಭಿವ್ಯಕ್ತಿ' ಚಿಣ್ಣರ ಮೇಳದ ಉದ್ಘಾಟನಾ ಶಿಬಿರದಲ್ಲಿ ಮಾತನಾಡಿದರು.

‘ಮಕ್ಕಳಿಗೆ ಬಾಲ್ಯದಲ್ಲಿ ಮಾರ್ಗದರ್ಶನ ನೀಡಬೇಕು. ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದರು.

ರಂಗಸಮಾಜ ಸದಸ್ಯ ಮಹಾಂತೇಶ ಗಜೇಂದ್ರಗಡ ಮಾತನಾಡಿ, ‘ರಂಗಭೂಮಿಯು ಕಲಿಸುವ ಪಾಠವನ್ನು ಯಾವುದೇ ಶಾಲೆ ಕಲಿಸಲ್ಲ. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯುವುದನ್ನು ಕಲಿಸುತ್ತದೆ. ಸಂಬಂಧಗಳ ಮಹತ್ವ ತಿಳಿಸುತ್ತದೆ. ವ್ಯಕ್ತಿತ್ವವನ್ನು ಕಟ್ಟಿಕೊಳ್ಳಲು ಪೂರಕ ವಾತಾವರಣ ಸೃಷ್ಟಿಸುತ್ತದೆ’ ಎಂದರು.

‘ಮಕ್ಕಳು ಮೊಬೈಲ್ ಫೋನ್ ಗೀಳು ಬೆಳೆಸಿಕೊಳ್ಳಬಾರದು. ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ರಂಗಾಯಣ ರೆಪರ್ಟರಿ ಕಲಾವಿದರು ‘ಮರಳಿ ಮಹಾತ್ಮನೆಡೆಗೆ' ನಾಟಕವನ್ನು ಪ್ರಸ್ತುತಪಡಿಸಿದರು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಚಿಣ್ಣರಮೇಳದ ಸಂಚಾಲಕ ಅರುಣಕುಮಾರ ಮೇದಾರ, ತರಬೇತುದಾರ ರಾಜ್ ಕವಡೆನವರ, ಸುನಂದಾ ನಿಂಬನಗೌಡರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-24-564944651

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.