ಧಾರವಾಡ: ‘ಮಕ್ಕಳು ಪ್ರತಿಭೆ ಪ್ರದರ್ಶಿಸಲು ಬೇಸಿಗೆ ಶಿಬಿರಗಳು ಸಹಕಾರಿ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ವತಿಯಿಂದ ನಡೆದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳು ಆಟ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಾಧನೆ ಮೆರೆಯಬೇಕು ಎಂದರು.

‘ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು. ಸಾಧನೆ ಮೆರೆದು ಕೀರ್ತಿ ತರಬೇಕು ಎಂದರು.

ರಂಗಾಯಣ ನಿರ್ದೇಶಕ ಝಕೀರ ನದಾಫ ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ರಂಗಭೂಮಿ ಮುಖ್ಯವಾದ ಪಾತ್ರ ವಹಿಸಿದೆ.

ಶಿಕ್ಷಣದ ಜೊತೆಗೆ ಹಾಡು, ನೃತ್ಯ, ನಾಟಕ ಕಲಿಸಬೇಕು. ಇದರಿಂದ ಜಾತಿ, ಧರ್ಮಗಳ ಅಪನಂಬಿಕೆಗಳು ತೊಲಗಿ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಪಾಟೀಲ, ಜಿಲ್ಲಾ ನಿರೂಪಣಾಧಿಕಾರಿ ಕಮಲಾ ಬೈಲೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಪಾಟೀಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-2058932812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.