ಧಾರವಾಡ: ‘ಕೇವಲ ಅಕ್ಷರ ಜ್ಞಾನಕ್ಕೆ ಸೀಮಿತವಾಗದೆ, ಭಾರತೀಯ ಸಂಸ್ಕಾರ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಒಳಗೊಂಡ ಸಮಗ್ರ ಶಿಕ್ಷಣ ನೀಡುವಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರಗಳು ಮಹತ್ತರ ಪಾತ್ರ ವಹಿಸುತ್ತಿವೆ’ ಎಂದು ಗರಗದ ಆತ್ಮರಾಮ ಸ್ವಾಮೀಜಿ ಹೇಳಿದರು.

ಸತ್ತೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಈಚೆಗೆ ನಡೆದ ಶಾಲೆಯ ದ್ವಿತೀಯ ಹಂತದ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಜೊತೆಗೆ ನೈತಿಕ ಶಿಕ್ಷಣದ ಅಗತ್ಯತೆ ಹೆಚ್ಚಾಗಿದೆ. ಮಕ್ಕಳಲ್ಲಿ ದೇಶಭಕ್ತಿ, ಹಿರಿಯರ ಬಗ್ಗೆ ಗೌರವ, ಸಂಸ್ಕಾರ, ಸಂಸ್ಕೃತಿ ಕಲಿಸುವುದು ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರಗಳು ಗುಣಮಟ್ಟದ ಶಿಕ್ಷಣದೊಂದಿಗೆ ಸುಸಂಸ್ಕೃತ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿವೆ’ ಎಂದು ಹೇಳಿದರು.

ರಾಷ್ಟ್ರೋತ್ಥಾನ ಉತ್ತರ ಪ್ರಾಂತದ ಆಡಳಿತ ಪ್ರಮುಖ ಜಯಣ್ಣ, ಮುಖ್ಯ ಶಿಕ್ಷಕ ರಾಮಕೃಷ್ಣ, ಗುರುರಾಜ ಅಗಡಿ, ಅಶೋಕ ಸೋನ್ಕರ್, ಅನಿತಾ ರೈ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-24-1650973364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.