ಧಾರವಾಡ: ‘ಇಂದಿನ ಮಕ್ಕಳಿಗೆ ವಿಧ್ಯೆಯ ಜೊತೆಗೆ ಸಂಸ್ಕಾರವನ್ನು ನೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು’ ಎಂದು ಸಾಯಿರಾಮ್ ಡೆವಲಪರ್ ಸಂಸ್ಥಾಪಕ ಮಂಜುನಾಥ ಮಕ್ಕಳಗೇರಿ ಹೇಳಿದರು.

ನಗರದ ಅರಿವು ಕ್ಲಾಸಸ್ ವತಿಯಿಂದ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಮತ್ತು ಬ್ಯಾಗ್ ವಿತರಿಸಿ ಅವರು ಮಾತನಾಡಿದರು.

‘ಸಂಸ್ಕಾರವಿಲ್ಲದ ಶಿಕ್ಷಣವು, ಸಮಾಜ ಹಾಗೂ ದೇಶದ ಜವಾಬ್ದಾರಿಯನ್ನು ಮರೆಯುವಂತೆ ಮಾಡುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ವನಿತಾ ಸೇವಾ ಸಮಾಜದ ಅಧ್ಯಕ್ಷ ಟಿ.ಎಲ್. ಪಾಟೀಲ ಮಾತನಾಡಿದರು. ಡಿವೈಪಿಸಿ ಆರ್. ಹುಡೇದಮನಿ, ಉಚಿತ ತರಗತಿಗಳಿಗೆ ಸ್ಥಳಾವಕಾಶ ನೀಡಿರುವ ಹಾಗೂ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅರಿವು ಕ್ಲಾಸಸ್ ಸಂಸ್ಥಾಪಕ ಗಿರೀಶ ತಗ್ಗಿನಮಠ, ಬೋಧಕರಾದ ನಂದಿಕೇಶ್ವರಿ ಹಿರೇಮಠ, ಶಂಕರ, ರಮೇಶ್,ವಿನಾಯಕ ಸಂಬಯ್ಯನಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-1011578113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.