ಧಾರವಾಡ: ‘ವಿದ್ಯಾರ್ಥಿಗಳಿಗೆ ಕಲಿಕೆ ಜತೆಗೆ ಕೆಲಸ ನೀಡುವ ಜೀವನಾಧಾರಿತ ಶಿಕ್ಷಣ ಪದ್ಧತಿಯು ಗಾಂಧೀಜಿ ಅವರ ಮೂಲ ಶಿಕ್ಷಣದ ಉದ್ದೇಶವಾಗಿತ್ತು. ಇಂಥ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿಸಲು ಸಾಧ್ಯ’ ಎಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅಭಿಪ್ರಾಯಪಟ್ಟರು.

ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ಈಚೆಗೆ ನಡೆದ ‘ಬೆಲ್ಲದ ಕೃಷಿ ಹಾಗೂ ಶಿಕ್ಷಣ ಪ್ರತಿಷ್ಠಾನ ದತ್ತಿ ಕಾರ್ಯಕ್ರಮದಲ್ಲಿ ‘ಕೃಷಿ ಹಾಗೂ ಶಿಕ್ಷಣ ಸೇವಾ ಗೌರವ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಅಖಿಲ ಭಾರತ ಪ್ರಾಥಮಿಕ ಶಾಲಾ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಮತ್ತು ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಮಾತನಾಡಿದರು. ಚಂದ್ರಕಾಂತ ಬೆಲ್ಲದ, ಶಂಕರ ಕುಂಬಿ, ಶಂಕರ ಹಲಗತ್ತಿ, ಪ್ರೊ. ಧನವಂತ ಹಾಜವಗೋಳ, ಜಿನದತ್ತ ಹಡಗಲಿ, ಬಸವಪ್ರಭು ಹೊಸಕೇರಿ ಇದ್ದರು.

ಹುಬ್ಬಳ್ಳಿ: ‘ಜೀವನದಲ್ಲಿ ಸಾಧನೆ ಮಾಡಲು ಆತ್ಮವಿಶ್ವಾಸ, ಧನಾತ್ಮಕ ಚಿಂತನೆ ಮತ್ತು ನಿರಂತರ ಪ್ರಯತ್ನ ಅಗತ್ಯ’ ಎಂದು ನಟಿ ಸಿರಿ ರವಿಕುಮಾರ್ ಹೇಳಿದರು.

ನಗರದ ಕೆಎಲ್ಇ ಸಂಸ್ಥೆಯ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಈಚೆಗೆ ನಡೆದ ‘ರಂಗಮಂಚ–2026’ ಪ್ರತಿಭಾ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕೆಎಲ್ಇ ಸಂಸ್ಥೆ ಜಂಟಿ ಕಾರ್ಯದರ್ಶಿ ಡಾ.ಪ್ರಕಾಶ ಕಡಕೋಳ ಮಾತನಾಡಿ, ‘ನಮ್ಮ ಸಂಸ್ಕೃತಿಯು ಸಾವಿರಾರು ವರ್ಷಗಳ ಇತಿಹಾಸ ಮತ್ತು ವೈವಿಧ್ಯತೆ ಹೊಂದಿದೆ. ಸಾಮಾಜಿಕ ಮೌಲ್ಯಗಳಿಂದ ಸಹಿಷ್ಣುತೆ, ಐಕ್ಯತೆ ಹಾಗೂ ನೈತಿಕತೆ ಸಿಗುತ್ತದೆ’ ಎಂದರು.

ಪ್ರೊ.ರಮಾಕಾಂತ ಡಿ., ಡಾ. ಅಮರ ಪಿ., ಪ್ರೊ. ಸಿದ್ದಲಿಂಗಪ್ಪ ಕಡಕೊಳ, ಪ್ರೊ. ಶೃತಿ ಕೆ.,ಪ್ರೊ. ಜ್ಯೋತಿ ಕೆ. ಹಾಗೂ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-24-1646990795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.