ಧಾರವಾಡ: ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ತೀರ್ಮಾನವನ್ನು ಖಂಡಿಸಿ ಎಐಡಿಎಸ್ಒ ಜಿಲ್ಲಾ ಘಟಕ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ‘ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರ ಕೈಬಿಡಿ’, ‘ಶಿಕ್ಷಣ ಉಳಿಯಲಿ’ ಘೋಷಣೆ ಕೂಗಿದರು. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು.

‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳು, ಶಿಕ್ಷಕರ ನೇಮಕಾತಿ ಮಾಡಿಕೊಂಡು ಅಭಿವೃದ್ಧಿಪಡಿಸಬೇಕಾದ ಸರ್ಕಾರ ಕಡಿಮೆ ದಾಖಲಾತಿಯ ನೆಪವೊಡ್ಡಿ ಸರಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ. ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರವು ಶಿಕ್ಷಣವನ್ನು ಸಂಪೂರ್ಣ ವ್ಯಾಪಾರೀಕರಣ ಮಾಡಲು ಹೊರಟಿದೆ’ ಎಂದು ಪ್ರತಿಭಟನಾಕಾರರು ದೂರಿದರು.

‘ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಕಾಡಂಚಿನ ಗ್ರಾಮಗಳು, ದೂರದ ಹಳ್ಳಿಗಳ 25 ಕ್ಕಿಂತ ಕಡಿಮೆ ದಾಖಲಾತಿ ಇರುತ್ತದೆ. ಈ ಪ್ರದೇಶಗಳಲ್ಲಿ ಬಹುಪಾಲು ಕೃಷಿ ಕಾರ್ಮಿಕರು ಹಾಗೂ ಕೂಲಿಕಾರರ ಮಕ್ಕಳು ಈ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಶಾಲೆಗಳನ್ನು ಮುಚ್ಚುವ ನಿಲುವು ಬಡವರು, ಕಾರ್ಮಿಕರ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ವಿರುದ್ಧ ಬಲಿಷ್ಠವಾದ ಹೋರಾಟವನ್ನು ಕಟ್ಟಬೇಕು ಎಂದು ಆಗ್ರಹಿಸಿದರು.

ಲಿಂಗರಾಜ ಅಂಗಡಿ, ಶಶಿಕಲಾ ಮೇಟಿ, ಸಿಂಧು ಕೌದಿ, ಶರಣಬಸವ ಗೋನವಾರ, ಭುವನಾ ಬಳ್ಳಾರಿ, ಗಂಗಾ ಕೊಕರೆ, ವೀರಭದ್ರಯ್ಯ ಚಿಕ್ಕಮಠ, ಸದಸ್ಯ ಯಲ್ಲಪ್ಪ ಸಂಗ್ರೇಸಿಕೊಪ್ಪ, ನಾಗಪ್ಪ ಏಣಗಿ, ಸಿದ್ದು ಚಿಪ್ಪಲಕಟ್ಟಿ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-24-1946103635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.