ಧಾರವಾಡ: ‘ಕಡಿಮೆ ಫಲಿತಾಂಶ ಸಾಧಿಸುವ ಖಾಸಗಿ ಹಾಗೂ ಇತರ ಶಾಲೆಗಳ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳಲ್ಲಿ ಸದೃಢಗೊಳಿಸುವ ಮತ್ತು ಸಾಮುದಾಯಿಕ ಪಾಲ್ಗೊಳುವಿಕೆಯಲ್ಲಿ ಕ್ರಿಯಾಶೀಲತೆ ಅಳವಡಿಸಿಕೊಳ್ಳುವ ಕ್ರಮವಾಗಬೇಕು. ನಿರಂತರವಾಗಿ ಪಾಲಕರ ಸಭೆ ನಡೆಯಬೇಕು. ಯಾವುದೇ ಸರ್ಕಾರಿ ಶಾಲೆಗಳ ವಿಲೀನದ ಪ್ರಕ್ರೀಯೆ ಇರುವುದಿಲ್ಲ’ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಬೊಮ್ಮಕ್ಕನವರ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಯಟ್ ಪ್ರಾಚಾರ್ಯ ಬಸವರಾಜ ನಾಲ್ವತವಾಡ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-1061220708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.