ಧಾರವಾಡ: ‘ಕಲೆ, ಸಾಹಿತ್ಯ, ಕ್ರೀಡಾ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಆಸಕ್ತಿ ಬೆಳೆಸಿಕೊಳ್ಳಬೇಕು. ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

‘ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸಿಗೆ ಖುಷಿ ನೀಡುತ್ತವೆ. ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಹಕಾರಿಯಾಗಿವೆ. ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತು ನೌಕರರನ್ನು ಒಗ್ಗೂಡಿಸಿ ವಿವಿಧ ಕಾರ್ಯಚಟುವಟಿಕೆ ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದು ಹೇಳಿದರು.

‘ಪರಿಷತ್ತಿನ ವತಿಯಿಂದ ಮೂರು ತಿಂಗಳಿಗೊಮ್ಮೆ ಕಾರ್ಯಕ್ರಮ ಆಯೋಜಿಸಬೇಕು. ನೌಕರರ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ನೌಕರರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮೆರೆಯಬೇಕು’ ಎಂದು ಸಲಹೆ ನೀಡಿದರು.

ಪರಿಷತ್ತಿನ ಅಧ್ಯಕ್ಷೆ ರಮಾ ಆರ್. ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ, ಪ್ರಧಾನ ಕಾರ್ಯದರ್ಶಿ ಪರ್ವಿನಬಾನು ಬುಳ್ಳಣ್ಣವರ, ಮಾಜಿ ಸಂಸದ ಪ್ರೊ.ಐ.ಜಿ. ಸನದಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಲತಾ ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-24-1199056945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.