ಧಾರವಾಡ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ, ಕನ್ನಡ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಏ.12 ರಂದು ‘ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ’ ಕುರಿತು ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ.

ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ಸ್ಪರ್ಧೆ ಆರಂಭವಾಗಲಿದ್ದು, ಮೊದಲ ಸುತ್ತಿನಲ್ಲಿ 50 ಅಂಕಗಳ ಬಹು ಆಯ್ಕೆ ಮಾದರಿಯ ಸುತ್ತು ನಡೆಯಲಿದೆ. ಈ ಸುತ್ತಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೊದಲ 12 ಅಭ್ಯರ್ಥಿಗಳು ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗುವುದು. ಈ 12 ಅಭ್ಯರ್ಥಿಗಳನ್ನು 6 ತಂಡಗಳಾಗಿ ವಿಂಗಡಿಸಿ ಎರಡನೇ ಹಂತದ ಮೌಖಿಕ ಸುತ್ತು ನಡೆಸಲಾಗುವುದು. ವಿಜೇತ ತಂಡಗಳಿಗೆ ಪ್ರಥಮ ₹50 ಸಾವಿರ , ದ್ವಿತೀಯ ₹30 ಸಾವಿರ ಬಹುಮಾನ ಹಾಗೂ ತೃತೀಯ ₹20 ಸಾವಿರ ಬಹುಮಾನ ಪ್ರಮಾಣ ಪತ್ರ ನೀಡಲಾಗುವುದು.

ಮಾಹಿತಿ ಮತ್ತು ನೋಂದಣಿಗಾಗಿ ಮೊ: 9740421421, 9845808941 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-24-2067745303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.