ಧಾರವಾಡ: ನೀಟ್ ಮರುಪರೀಕ್ಷೆ ನಡೆಸಲು ಕೈಗೊಂಡಿರುವ ನಿರ್ಧಾರಕ್ಕೆ ಕರ್ನಾಟಕ ಅನುದಾನರಹಿತ ಪಿಯು ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ (ಕುಪ್ವಾ) ಜಿಲ್ಲಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ನೀಟ್ ಪರೀಕ್ಷೆಗಾಗಿ ವಿದ್ಯಾರ್ಥಿಗಳು ಕಳೆದ ಹಲವು ತಿಂಗಳಿಂದ ನಿರಂತರ ಪರಿಶ್ರಮ ಪಟ್ಟು ತಯಾರಿ ನಡೆಸಿದ್ದರು. ಈಗ ಪರೀಕ್ಷೆ ಮುಗಿದ ನಂತರ ಮರುಪರೀಕ್ಷೆ ಘೋಷಿಸಿರುವುದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಿದೆ. ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ರೀತಿಯ ಅಕ್ರಮ ಅಥವಾ ಅವ್ಯವಹಾರ ನಡೆದಿದ್ದರೆ ಅದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯ. ಆದರೆ, ಕೆಲವು ಕೇಂದ್ರಗಳಲ್ಲಿ ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿದ್ಯಾರ್ಥಿಗಳ ಮೇಲೆ ಮರುಪರೀಕ್ಷೆಯ ಭಾರ ಹಾಕುವುದು ನ್ಯಾಯಸಮ್ಮತವಲ್ಲ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-24-978981402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.