ಹುನಗುಂದ: ‘ವಿದ್ಯಾರ್ಥಿಗಳು, ಹಿರಿಯರ ತ್ಯಾಗ ಮತ್ತು ಬಲಿದಾನ ಸ್ಮರಿಸಬೇಕು. ಸಾಧನೆಗೆ ದೇಶಪ್ರೇಮವೇ ಮೂಲವಾಗಬೇಕು. ರಾಷ್ಟ್ರಪ್ರೇಮ ಕಲಿಸದ ಶಿಕ್ಷಣ ವ್ಯರ್ಥ’ ಎಂದು ಧಾರವಾಡದ ರಂಗಕರ್ಮಿ ಶಶಿಧರ ನರೇಂದ್ರ ಹೇಳಿದರು.

ನಗರದ ವಿ.ಎಂ.ಎಸ್.ಆರ್.ವಿ. ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಘಟಕಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾಲೇಜಿನಲ್ಲಿನ ಸೌಕರ್ಯ ಸದ್ಬಳಕೆ ಮಾಡಿಕೊಂಡು, ಸತತ ಪ್ರಯತ್ನದ ಮೂಲಕ ಗುರಿ ಸಾಧಿಸಬೇಕು’ ಎಂದರು.

ಸಾನ್ನಿಧ್ಯ ವಹಿಸಿದ್ದ ಇಳಕಲ್ನ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗಬೇಕು ಹಾಗೂ ದುಶ್ಚಟಗಳಿಂದ ದೂರವಿರಬೇಕು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಮಹಾಂತೇಶ ಕಡಪಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಸಮಾಜಮುಖಿ ಆಗಬೇಕು. ಉತ್ತಮ ಪ್ರಜೆಯಾಗಿ ಈ ನಾಡಿಗೆ ಹೆಚ್ಚಿನ ಸೇವೆ ಸಲ್ಲಿಸಬೇಕು’ ಎಂದು ಸಲಹೆ ನೀಡಿದರು.

ಪ್ರಾಚಾರ್ಯ ಎಸ್.ಆರ್. ಗೋಲಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ವರ್ಷದ ಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿಯನ್ನು ವಿಜ್ಞಾನ ವಿಭಾಗ ಸೃಷ್ಟಿ ಗಡೇದ, ವಾಣಿಜ್ಯ ವಿಭಾಗದ ಸುರೇಖಾ ಪೂಜಾರ ಹಾಗೂ ಕಲಾ ವಿಭಾಗದ ಬಸಪ್ಪ ಮೇಟಿ ಪಡೆದುಕೊಂಡರು.

ಕ್ರೀಡಾ ನಿರ್ದೇಶಕ ಎಸ್.ಬಿ. ಚಳಗೇರಿ ಸ್ವಾಗತಿಸಿದರು. ಪ್ರಾಧ್ಯಾಪಕ ಎಲ್.ಎನ್. ಕುಲಕರ್ಣಿ ಅವರು ಅತಿಥಿಗಳನ್ನು ಪರಿಚಯಿಸಿದರು. ಕಾಲೇಜು ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಭೀಮಾಶಂಕರ ಹಲಸಂಗಿ ವರದಿ ವಾಚಿಸಿದರು. ರಮಜಾನಬಿ ಪಿಂಜಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-19-1282990541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.