ಧಾರವಾಡ: ‘ಇತ್ತೀಚಿನ ವರ್ಷಗಳಲ್ಲಿ ನವೋದ್ಯಮಗಳ ಸಂಖ್ಯೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿನ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ನಡೆದ ಸೃಷ್ಟಿ ನಾವೀನ್ಯತಾ ವಿನಿಮಯ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ಜಗತ್ತಿನಲ್ಲಿಯೇ ಆರ್ಥಿಕವಾಗಿ ಅತಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಇಲ್ಲಿ ಯುವಜನರು ಹೆಚ್ಚಿ ಪ್ರಮಾಣದಲ್ಲಿದ್ದಾರೆ. ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ನವ ಕೌಶಲಗಳ ಕಲಿಕೆ ಮತ್ತು ವಿನಿಮಯಕ್ಕೆ ಸೃಷ್ಟಿ ಕಾರ್ಯಕ್ರಮವು ವೇದಿಕೆಯಾಗಿದೆ’ ಎಂದು ಹೇಳಿದರು.

ಇಸ್ರೊ ವಿಜ್ಞಾನಿ ಬಿ.ಎಚ್.ಎಂ. ದಾರುಕೇಶ ಮಾತನಾಡಿ, ‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಾಧನೆ ಮೆರೆಯುವ ಮೂಲಕ ತಮ್ಮದೇ ಆದ ಕೊಡುಗೆ ನೀಡಬೇಕು’ ಎಂದರು.

ಬೆಳಗಾವಿಯ ವಿಟಿಯು ಕುಲಪತಿ ವಿದ್ಯಾಶಂಕರ್, ಎಬಿವಿಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಷ್ ಚೌಹಾಣ, ಎಸ್ಡಿಎಂಇ ಸೊಸೈಟಿಯ ಕಾರ್ಯದರ್ಶಿ ಜೀವಂಧರ ಕುಮಾರ, ಪ್ರಾಚಾರ್ಯ ರಮೇಶ ಎಲ್. ಚಕ್ರಸಾಲಿ, ಎಬಿವಿಪಿಯ ಗೋಪಿ ರಂಗಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-439221818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.