ಧಾರವಾಡ: ‘ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಅದನ್ನು ತಲುಪಲು ಶ್ರಮಿಸಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಒಳ್ಳೆಯ ಪ್ರಜೆಯಾಗಿ ಬದುಕಬೇಕು’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಎಂ. ಖಾನ್ ಹೇಳಿದರು.

ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಜಿಮಖಾನಾ ವಿಭಾಗದಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಇತರೆ ಕಾರ್ಯಚಟುವಟಿಕೆಗಳ ಸಮಾರೋಪಸಮಾರಂಭ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ವಿದ್ಯಾರ್ಥಿಗಳು ತಂತ್ರಜ್ಞಾನವನ್ನುಸಾಧನವಾಗಿ ಬಳಸಿಕೊಳ್ಳಬೇಕು. ದೂರದೃಷ್ಟಿ ಇಟ್ಟುಕೊಂಡು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಕಲಿಯುವ ಶಿಕ್ಷಣ ಸಂಸ್ಥೆ ಬಗ್ಗೆ ಅಭಿಮಾನ ಹೊಂದಿರಬೇಕು’ ಎಂದು ತಿಳಿಸಿದರು.

ರಂಗ ನಿರ್ದೇಶಕಿ ವಿಶ್ವೇಶ್ವರಿ ಹಿರೇಮಠ ಮಾತನಾಡಿ, ‘ವಿದ್ಯಾರ್ಥಿಗಳು ದೇಶಿಯ ಸಂಸ್ಕೃತಿ, ಜಾನಪದ ಕಲೆ, ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು. ಪ್ರಸ್ತುತ ತಂತ್ರಜ್ಞಾನದಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಕಡಿಮೆಯಾಗುತ್ತಿದೆ’ ಎಂದರು.

ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಅಧ್ಯಕ್ಷ ಪ್ರೊ.ಬಿ.ಎಸ್.ಭಜಂತ್ರಿ ಮಾತನಾಡಿದರು. ರಾಷ್ಟ್ರಮಟ್ಟದಲ್ಲಿ ಎನ್.ಎಸ್.ಎಸ್, ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಸಂಜಯಕುಮಾರ ಬಿರಾದಾರ, ಮಹಿಮಾ ಮೇಟಿ ಹಾಘೂ ಪಠ್ಯ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಾಚಾರ್ಯ ಪ್ರೊ. ಐ.ಸಿ. ಮುಳಗುಂದ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಕಾಂಚನ್ ಗಾಂವಕರ, ಮುಕುಂದ ಲಮಾಣಿ, ರಜನಿ., ಸುರೇಶ ಹುಲ್ಲನ್ನವರ, ಜಾಕೀರ, ಎ.ಸಿ.ಕುರಹಟ್ಟಿ, ಎಸ್.ಜಿ. ಜಾಧವ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-24-1707498662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.