ಧಾರವಾಡ: ‘ವಿದ್ಯಾರ್ಥಿಗಳ ಸರ್ವಾಂಗಿಣ ಅಭಿವೃದ್ಧಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ. ಪ್ರತಿಯೊಬ್ಬರು ಇವುಗಳಲ್ಲಿ ಭಾಗವಹಿಸಬೇಕು’ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಜೀವಂಧರಕುಮಾರ್ ಹೇಳಿದರು.

ನಗರದ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ‘ಇನ್ಸಿಗ್ನಿಯಾ’ ರಾಷ್ಟ್ರಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಚಾರ್ಯ ಪ್ರೊ. ರಮೇಶ ಎಲ್. ಚಕ್ರಸಾಲಿ ಮಾತನಾಡಿ, ‘ವಿದ್ಯಾಥಿಗಳ ಕೌಶಲಗಳನ್ನು ಪ್ರದರ್ಶಿಸಲು ಮತ್ತು ಉತ್ತಮವಾಗಿ ರೂಪಿಸಿಕೊಳ್ಳಲು ಇನ್ಸಿಗ್ನಿಯಾ ಉತ್ಸವವು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಉತ್ಸವದ ಆಟೋಎಕ್ಸ್-ಪೋದಲ್ಲಿ ವಿಭಿನ್ನಶೈಲಿಯ ಮೋಟಾರ್ ಸೈಕಲ್, ವಿಂಟೇಜ್ ವಾಹನಗಳು, ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ವಾಹನಗಳು ಸೇರಿದಂತೆ ಹಲವು ವಾಹನಗಳನ್ನು ಪ್ರದರ್ಶಿಸಲಾಯಿತು. ಪೇಪರ್ ಪ್ರೆಸೆಂಟೇಷನ್, ರಸಪ್ರಶ್ನೆ, ಪೂರ್ವ ಮತ್ತು ಪಾಶ್ಚಿಮಾತ್ಯ ನೃತ್ಯ, ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮ ಸಂಚಾಲಕ ಸತೀಶ ಕೆ.ಎ. ಪ್ರೊ. ಜೆ.ವಿ. ವಡವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-24-33796204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.