ಧಾರವಾಡ: ‘ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಶಿಸ್ತು ಮತ್ತು ಸಮಯಪಾಲನೆ ರೂಢಿಸಿಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದು ಎಸ್ಡಿಎಂ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿ ಡಾ.ಶುಭಲಕ್ಷ್ಮಿ ನಾಯಕ್ ಹೇಳಿದರು.

ಸತ್ತೂರಿನ ಎಸ್ಡಿಎಂ ವಿಶ್ವವಿದ್ಯಾಲಯ ವತಿಯಿಂದ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ವಾರ್ಷಿಕ ಸಾಂಸ್ಕೃ ತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಅಧ್ಯಯನ ಮಾಡಬೇಕು. ನಿರಂತರ ಓದುವ ಹಾಗೂ ವಿಷಯ ಮನನ ಮಾಡಿಕೊಳ್ಳುವ ಕಲೆ ಬೆಳೆಸಿಕೊಳ್ಳಬೇಕು’ ಎಂದರು.

ಪ್ರಾಚಾರ್ಯ ಡಾ.ವಿಜಯ್ಕುಲಕರ್ಣಿ ಮಾತನಾಡಿ, ‘ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ತಿಳಿಸಿದರು.

ಎಸ್ಡಿಎಂ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ್ ಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್, ಸಹ ಕುಲಪತಿ ವಿ.ಜೀವಂಧರ್ ಕುಮಾರ್, ವೈದ್ಯಕೀಯ ವರಿಷ್ಠಾಧಿಕಾರಿ ಡಾ.ಕಿರಣ್ ಹೆಗ್ಡೆ, ಕುಲಸಚಿವ ಡಾ.ಚಿದೇಂದ್ರ ಎಂ.ಶೆಟ್ಟರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-11834334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.