ಧಾರವಾಡ: ‘ವಿದ್ಯಾರ್ಥಿಗಳು ಓದುವ ಮತ್ತು ಬರೆಯುವ ಕಲೆಯನ್ನು ರೂಢಿಸಿಕೊಳ್ಳಬೇಕು. ವಿಷಯಗಳನ್ನು ಗ್ರಹಿಸಿ ಮನದಟ್ಟು ಮಾಡಿಕೊಳ್ಳಬೇಕು’ ಎಂದು ಲೇಖಕ ಸದಾಶಿವ ಮರ್ಜಿ ಹೇಳಿದರು.

ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಈಚೆಗೆ ನಡೆದ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ಎನ್ಸಿಸಿ, ಯುವ ರೆಡ್ ಕ್ರಾಸ್ ರೋವರ್ಸ್ ಮತ್ತು ರೆಂಜರ್ಸ್ ಘಟಕಗಳ ವಾರ್ಷಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಗುರುನಾಥ ಕೆ. ಬಡಿಗೇರ ಮಾತನಾಡಿ, ‘ಶಿಕ್ಷಣವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ದಿಕ್ಸೂಚಿಯಾಗಿದೆ’ ಎಂದರು. ಬಸವರಾಜೇಶ್ವರಿ ಪಾಟೀಲ ಅವರು ಐಕ್ಯುಎಸಿ ಘಟಕದ ವಾರ್ಷಿಕ ಕಾರ್ಯಕ್ರಮಗಳ ವರದಿ ವಾಚನ ಮಾಡಿದರು.

ಐಕ್ಯುಎಸಿ ಘಟಕದ ಸಂಚಾಲಕ ಇಬ್ರಾಹಿಂ ಸೌದಾಗರ, ಅರುಣ ಕಲ್ಲೋಳಿಕರ, ವಿಜಯಲಕ್ಷ್ಮೀ ದಾನರಡ್ಡಿ, ಪ್ರವೀಣ ಅಳವಂಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-408192761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.