ಧಾರವಾಡ: ‘ಪ್ರತಿಯೊಬ್ಬ ವಿದ್ಯಾರ್ಥಿಯೂ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ಶ್ರದ್ಧೆ ಮತ್ತು ಪರಿಶ್ರಮದಿಂದ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಹೇಳಿದರು.

ನಗರದ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ (ಎಸ್ವಿವೈಎಂ) ವತಿಯಿಂದ ರಂಗಾಯಣದ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ಶನಿವಾರ ನಡೆದ 2025-26ನೇ ಸಾಲಿನ ವೆನ್ಸಡೇ ವೆಬಿನಾರ್ ‘ಹಣತೆ’ ಕಿರು ಹೊತ್ತಿಗೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

‘ಸಾಧಿಸುವ ಛಲ ಇರಬೇಕು. ಸೋಲಿಗೆ ಹೆದರಬಾರದು. ಸತತ ಅಭ್ಯಾಸ, ಪ್ರಯತ್ನದಿಂದ ಯಶಸ್ಸು ಸಾಧಿಸಬಹುದು. ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು (ಎಸ್ಡಿಎಂಸಿ) ಮಕ್ಕಳ ಸುರಕ್ಷತೆಗೆ ಗಮನ ಹರಿಸಬೇಕು. ಮಕ್ಕಳನ್ನು ಉತ್ತಮ ವಾತಾವರಣದಲ್ಲಿ ಬೆಳೆಸಬೇಕು. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು. ಎಷ್ಟೇ ಕಷ್ಟಗಳಿದ್ದರೂ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡಬಾರದು. ವಿದ್ಯಾರ್ಥಿಗಳು ವಿಷಯಗಳನ್ನು ಕಲಿಯಲು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಎಸ್ವಿವೈಎಂ ವೆಬಿನಾರ್ನಂಥ ಕಾರ್ಯಕ್ರಮಗಳು ಸಹಕಾರಿಯಾಗಿವೆ’ ಎಂದರು.

ಪ್ರಭಾರ ಡಿಡಿಪಿಐ ಉಮೇಶ ಬೊಮ್ಮಕ್ಕನವರ ಮಾತನಾಡಿ, ‘ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಸ್ವಿವೈಎಂ ಶ್ರಮಿಸುತ್ತಿದೆ. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದರು.

ಎಸ್ವಿವೈಎಂ ಉತ್ತರ ಕರ್ನಾಟಕ ಪ್ರಾದೇಶಿಕ ಮುಖ್ಯಸ್ಥ ಜಯಂತ್ ಕೆ.ಎಸ್.ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿ ಐಶ್ವರ್ಯಾ ಮತ್ತು ಚೈತ್ರಾ ಅನಿಸಿಕೆ ಹಂಚಿಕೊಂಡರು.

ಎಸ್ವಿವೈಎಂ ಡೆಪ್ಯುಟಿ ಸಿಇಒ ಪ್ರವೀಣಕುಮಾರ ಎಸ್., ಶ್ರೀಕಾಂತ್ ಹಂಜಿ, ಮಂಜುನಾಥ ಹಿರೇಮಠ, ಎಸ್.ಎನ್. ಲಿಂಗರಾಜು, ಶಿವಾನಂದ ವಸ್ತ್ರದಮಠ, ಜಯಕುಮಾರ ಕೆ, ಅನಿಲಕುಮಾರ ಕುರ್ಲಗೇರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-1859253265

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.