ಜೊಯಿಡಾ: ‘ಐತಿಹಾಸಿಕ ಸ್ಮಾರಕಗಳು, ಪಾರಂಪರಿಕ ತಾಣಗಳ ಸಂರಕ್ಷಣೆ ಜೊತೆಗೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಧಾರವಾಡ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ. ಖಾನ್ ಹೇಳಿದರು.

ತಾಲ್ಲೂಕಿನ ಉಳವಿಯಲ್ಲಿ ಹಮ್ಮಿಕೊಂಡಿರುವ ಧಾರವಾಡ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಎನ್ಎಸ್ಎಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಎಂ.ಬಿ. ದಳಪತಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಮೇ 21ರವರೆಗೆ ನಡೆಯುವ ಶಿಬಿರದಲ್ಲಿ ಕಾರವಾರ, ಗದಗ, ಧಾರವಾಡ ಜಿಲ್ಲೆಯ ವಿವಿಧ ಕಾಲೇಜುಗಳಿಂದ 200 ಸ್ವಯಂ ಸೇವಕರು, 10 ಕಾರ್ಯಕ್ರಮಾಧಿಕಾರಿಗಳು ಪಾಲ್ಗೊಂಡಿದ್ದಾರೆ’ ಎಂದರು.

‘ಪ್ಲಾಸ್ಟಿಕ್ ಮುಕ್ತ ಉಳವಿ, ಸ್ಮಾರಕಗಳ ಸಂರಕ್ಷಣೆ, ಜನರಲ್ಲಿ ಸ್ವಚ್ಛತೆ ಅರಿವು ಮೂಡಿಸುವುದು, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಅರಿವು ಮೂಡಿಸುವುದು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವುದು ಹಾಗೂ ಭಾವೈಕ್ಯ ಮೂಡಿಸುವುದು ಶಿಬಿರದ ಉದ್ದೇಶವಾಗಿದೆ’ ಎಂದು ತಿಳಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕ ಶಂಕ್ರಯ್ಯ ಕಲ್ಮಠ ಶಾಸ್ತ್ರಿ, ಉಳವಿ ಚನ್ನಬಸವೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸಂಜಯ್ ಕಿತ್ತೂರು, ಗೋಪಾಲಕೃಷ್ಣ ಶಿವಪೂರ ಮಾತನಾಡಿದರು.

ಉಳವಿ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ಅಸ್ಲಂ ಮುಗದ, ಜೊಯಿಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಅಂಜಲಿ ರಾಣೆ, ಶಿಬಿರಾಧಿಕಾರಿ ಮಹಮ್ಮದ್ ವಾಯೀಜ್, ಶಿವಯೋಗಿ ಹಾವೇರಿ ಇದ್ದರು. ಕಸ್ತೂರಿ ದಳವಾಯಿ ನಿರೂಪಿಸಿದರು. ನೇತ್ರಾವತಿ ಗಬ್ಬುರು ಸ್ವಾಗತಿಸಿದರು. ಪುಂಡಲೀಕ ಮಾದರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-20-254460300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.