ಧಾರವಾಡ: ‘ಸಮಾಜದಲ್ಲಿ ಮಹಿಳೆಯರ ಗೌರವ ಮತ್ತು ಸುರಕ್ಷತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಒದಗಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ (ನಿರೋಧ, ನಿರ್ಬಂಧನೆ ಹಾಗೂ ನಿವಾರಣೆ) ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಪ್ರತಿಯೊಂದು ಸಂಸ್ಥೆಯಲ್ಲೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಹಿಳೆಯರ ದೂರುಗಳನ್ನು ಗೋಪ್ಯವಾಗಿ ಸ್ವೀಕರಿಸಲು ಸೆಕ್ಷುವಲ್ ಹೆರಾಸ್ಮೆಂಟ್ ಎಲೆಕ್ಟ್ರಾನಿಕ್ ಬಾಕ್ಸ್ (ಶೀ ಬಾಕ್ಸ್) ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ತಿಳಿಸಿದರು.

‘ಮಹಿಳೆಯರು ಅನ್ಯಾಯ, ಕಿರುಕುಳ, ದೌರ್ಜನ್ಯಗಳನ್ನು ಧೈರ್ಯವಾಗಿ ಪ್ರಶ್ನಿಸಬೇಕು. ದೂರು ದಾಖಲಿಸಬೇಕು’ ಎಂದು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಮಾತನಾಡಿ, ‘ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಮಹಿಳೆಯರ ಮೇಲೆ ಯಾವುದೇ ರೀತಿಯ ಶೋಷಣೆ, ಲೈಂಗಿಕ ಕಿರುಕುಳ ಅಥವಾ ಅನ್ಯಾಯ ನಡೆದಿದ್ದರೆ ಅದನ್ನು ಧೈರ್ಯದಿಂದ ಎದುರಿಸಿ ಪೊಲೀಸ್ ಇಲಾಖೆಗೆ ತಿಳಿಸಬೇಕು’ ಎಂದು ಹೇಳಿದರು.

‘ಉನ್ನತ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಯ ಸಮಸ್ಯೆ, ಸುರಕ್ಷತೆ ಹಾಗೂ ಮಾನಸಿಕ ನೆಮ್ಮದಿಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ರಾಜ್ಯ ಮಹಿಳಾ ಆಯೋಗ ಉಪ ನಿರ್ದೇಶಕ ಬಿ.ಎಚ್. ಕೃಷ್ಣಪ್ಪ, ಸ್ಥಳೀಯ ದೂರು ನಿವಾರಣ ಸಮಿತಿಯ ಅಧ್ಯಕ್ಷೆ ಸಂಗೀತಾ ಮಾನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲೆ ಆಶಾ ಪ್ರಳಯಕಲ್ಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-90939695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.