ಕಡರನಾಯ್ಕನಹಳ್ಳಿ: ಉತ್ತಮ ಆಹಾರ, ಆಚಾರ-ವಿಚಾರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹರಪನಹಳ್ಳಿ ಜನನಿ ಯೋಗ, ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್ ಅಭಿಪ್ರಾಯಪಟ್ಟರು.

ಸಮೀಪದ ಎಕ್ಕೆಗೊಂದಿ ಗ್ರಾಮದಲ್ಲಿ ಜನನಿ ಪ್ರಕೃತಿ ಚಿಕಿತ್ಸಾ ಕೇಂದ್ರ, ಕರ್ನಾಟಕ ನವನಿರ್ಮಾಣ ಸೇನೆ, ಮಾರಿಕಾಂಬಾ ದೇವಸ್ಥಾನ ಸೇವಾ ಸಮಿತಿ ಮತ್ತು ಎಸ್ಜೆವಿಪಿ ಪದವಿ ಕಾಲೇಜಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಯುಕ್ತಾಶ್ರಯದಲ್ಲಿ ಎಕ್ಕೆಗೊಂದಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಯೋಗ ಮತ್ತು ಪ್ರಕೃತಿ ಉಚಿತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪಾಶ್ಚಾತ್ಯ ಜೀವನಶೈಲಿಯ ಆಹಾರ ಪದ್ಧತಿಯಿಂದ ಕಾಯಿಲೆಗಳು ಹರಡುತ್ತಿವೆ. ಪ್ರಕೃತಿಯಲ್ಲೇ ಅನೇಕ ಆರೋಗ್ಯಕಾರಕ ಅಂಶಗಳಿವೆ. ಪ್ರಕೃತಿ ಚಿಕಿತ್ಸಾ ಪದ್ಧತಿ ಖರ್ಚಿಲ್ಲದ ಯೋಗ, ಧ್ಯಾನ, ವ್ಯಾಯಾಮ ಮುಂತಾದ ಅಂಶಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಅಲೋಪಥಿ ವೈದ್ಯಪದ್ಧತಿಯಲ್ಲಿ ತಕ್ಷಣಕ್ಕೆ ಪರಿಹಾರ ಸಿಕ್ಕಿದರೂ, ಶಾಶ್ವತವಾಗಿ ನಮ್ಮ ಆರೋಗ್ಯ ಸಮಸ್ಯೆಗೆ ಪರಿಹಾರ ಕೇವಲ ಪ್ರಕೃತಿ ಚಿಕಿತ್ಸೆಯಿಂದ ಮಾತ್ರ ಸಾಧ್ಯ. ಈ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಪ್ರಕೃತಿ ಚಿಕಿತ್ಸೆಯ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಎಲ್ಲರೂ ಜತೆಯಾಗಿ ಕಾರ್ಯ ನಿರ್ವಹಿಸೋಣ ಎಂದು ಪತ್ರಕರ್ತ ಪಂಚಾಕ್ಷರಿ ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೈ.ಎನ್. ನಾಗರಾಜ್ ಉದ್ಘಾಟಿಸಿದರು. ನವನಿರ್ಮಾಣ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಬಿ.ರುದ್ರೇಗೌಡ ಘಟಕದ ಅಧ್ಯಕ್ಷತೆ ವಹಿಸಿದ್ದರು.

ಪ್ರಾಧ್ಯಾಪಕ ಬಿ. ಜಯರಾಂ, ಯೋಗ ಶಿಕ್ಷಕರಾದ ನಿರಂಜನ್, ಎಂ.ಮೀನಾಕ್ಷಿ, ಎಸ್ಡಿಎಂಸಿ ಅಧ್ಯಕ್ಷ ಬರ್ಕತ್ ಅಲಿ, ದುರ್ಗಾಂಬಿಕಾ ದೇವಸ್ಥಾನ ಸಮಿತಿ ಅಧ್ಯಕ್ಷ ಹುಲಿಗೇಶ್, ಅನುದಾನಿತ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ವಿ. ನಾಗೇಂದ್ರಪ್ಪ, ಮಂಜುನಾಥ ಬಾನುವಳ್ಳಿ, ಪ್ರಗತಿಪರ ಕೃಷಿಕ ಸಂಜೀವರೆಡ್ಡಿ, ಪತ್ರಕರ್ತ ಮಲ್ಲಿಕಾರ್ಜುನ ಕಲಾಲ್, ಎಸ್ಡಿಎಂಸಿ ಉಪಾಧ್ಯಕ್ಷೆ ಶಕುಂತಲಾ, ಎನ್ಎಸ್ಎಸ್ ಯೋಜನಾಧಿಕಾರಿ ವಿಶಾಲ್ ಬೆಂಚಳ್ಳಿ, ಪ್ರೊ. ಸಂಕೀರ್ಣ ಪಿ.ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-43-243646002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.