ದೊಡ್ಡಬಳ್ಳಾಪುರ: ಡಾ.ಅನುಪಮಾ ನಿರಂಜನ ಅವರು ವೈದ್ಯೆ ಮತ್ತು ಜನಪರ ಚಿಂತಕಿಯಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಅಚ್ಚಳಿಯದೇ ಉಳಿಯುವಂತಹ ವಿಚಾರಗಳನ್ನು ನೀಡಿದ್ದಾರೆ ಎಂದು ಲೇಖಕಿ, ನಿವೃತ್ತ ಕನ್ನಡ ಉಪನ್ಯಾಸಕಿ ಕೆ.ಎಸ್.ಪ್ರಭಾ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ವತಿಯಿಂದ ಶ್ರೀದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ನಡೆದ ಡಾ.ಅನುಪಮಾ ನಿರಂಜನ ಅವರ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದರು.

ದೊಡ್ಡಬಳ್ಳಾಪುರದ ಅವರ ಸಾಹಿತ್ಯವು ಸಮಾಜದ ಸ್ವಾಸ್ಥ್ಯವನ್ನು ಕಾಯುವ ಮತ್ತು ಜನರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿದೆ. ವೈದ್ಯಕೀಯ ವೃತ್ತಿ ಮತ್ತು ಪ್ರಗತಿಪರ ಸಾಮಾಜಿಕ ಕಾಳಜಿಯ ಅಪೂರ್ವ ಸಮ್ಮಿಲನ ಅನುಪಮ ನಿರಂಜನ ಆಗಿದ್ದರು ಎಂದು ಹೇಳಿದರು.

ವೈಜ್ಞಾನಿಕ ಜ್ಞಾನವನ್ನು ಸರಳ ಕನ್ನಡದಲ್ಲಿ ಜನಸಾಮಾನ್ಯರಿಗೆ ದಾಟಿಸುವ ಮೂಲಕ ವೈದ್ಯ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದರು. ವೃತ್ತಿಯಲ್ಲಿ ವೈದ್ಯರಾಗಿದ್ದರೂ ಬರವಣಿಗೆಯಲ್ಲೂ ಅಷ್ಟೇ ಗಂಭೀರವಾಗಿ ತೊಡಗಿಸಿಕೊಂಡವರು. ಇವರ ಕಾದಂಬರಿಗಳಲ್ಲಿ ಹೆಣ್ಣಿನ ಸಮಸ್ಯೆಗಳು, ಸಾಮಾಜಿಕ ಆಳ-ಅಗಲಗಳು ಹಾಗೂ ಕೌಟುಂಬಿಕ ಸಂಬಂಧಗಳ ಚಿತ್ರಣ ಹೆಚ್ಚಾಗಿ ಕಂಡುಬರುತ್ತವೆ ಎಂದರು.

ಅನುಪಮ ನಿರಂಜನ ಅವರ ‘ಎಳೆ’ ಕಾದಂಬರಿ ಕುರಿತು ಕವಯಿತ್ರಿ ವಸುಂದರರೆಡ್ಡಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಶ್ರೀದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನಿಲಯಪಾಲಕಿ ಮಮತಾ, ಮಹಿಳಾ ಸಮಾಜ ಮಾಜಿ ಅಧ್ಯಕ್ಷೆ ಎಲ್.ಸಿ.ದೇವಕಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ. ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಜಿ.ಸುರೇಶ್, ಭಾರತ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಪರಿಸರ ಪ್ರಜ್ಞಾ ಕೇಂದ್ರದ ಕಾರ್ಯದರ್ಶಿ ಡಿ.ಆರ್.ನಟರಾಜು, ಕವಿಗಳಾದ ನಾಗದಳ ನಟರಾಜು, ವಾಣಿಗಾರಹಳ್ಳಿ ಶ್ರೀನಿವಾಸ್, ನಿಲಯಪಾಲಕ ಸಿ.ಅಣ್ಣಯ್ಯ, ಕಲಾವಿದರಾದ ನಾಗರತ್ನಮ್ಮ, ಬಾಶೆಟ್ಡಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಮಂಜುಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-15-1376317510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.