ದೊಡ್ಡಬಳ್ಳಾಪುರ: ಪುಸ್ತಕಗಳು ನಮ್ಮ ಬದುಕಿನ ದಾರಿದೀಪಗಳಾಗಿವೆ. ಮಹನೀಯರ ಜೀವನ ಚರಿತ್ರೆ, ಸಾಹಿತ್ಯ, ವಿಜ್ಞಾನ ಮತ್ತು ಇತಿಹಾಸದ ಪುಸ್ತಕಗಳು ನಮಗೆ ಜೀವನದಲ್ಲಿ ಸರಿಯಾದ ದಿಕ್ಕನ್ನು ತೋರಿಸುತ್ತವೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಜಿಲ್ಲಾ ಸಂಚಾಲಕ ಗಂಗರಾಜ ಶಿರವಾರ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ನಗರದ ವನ್ನಿಗರ ಪೇಟೆಯ ಸಿ.ನಟರಾಜ್ ನಾಗದಳ, ಕೌಸಲ್ಯನಟರಾಜ್ ಅವರ ಮನೆಯಲ್ಲಿ ಆಯೋಜಿಸಿದ್ದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳಲ್ಲಿ ಓದುವ ಸಂಸ್ಕೃತಿ ಬೆಳೆಸಿದರೆ ಜ್ಞಾನವಂತ ಮತ್ತು ಸಂಸ್ಕಾರವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಂದಿನ ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಮೊಬೈಲ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಗೀಳಿಗೆ ಒಳಗಾಗಿ ಮಕ್ಕಳು ಪುಸ್ತಕಗಳಿಂದ ದೂರವಾಗುತ್ತಿದ್ದಾರೆ. ಆದರೆ ಪುಸ್ತಕ ಓದುವ ಹವ್ಯಾಸ ಮಕ್ಕಳ ಜ್ಞಾನವನ್ನು ಹೆಚ್ಚಿಸುವುದಲ್ಲದೆ, ಅವರ ಚಿಂತನೆ, ಕಲ್ಪನೆ ಮತ್ತು ವ್ಯಕ್ತಿತ್ವವನ್ನು ರೂಪಿಸುತ್ತದೆ. ಆದ್ದರಿಂದ ಪ್ರತಿಯೊಂದು ಮನೆಯಲ್ಲೂ ‘ಮನೆಗೊಂದು ಗ್ರಂಥಾಲಯ’ ಎಂಬ ಕಲ್ಪನೆ ಬೆಳೆಸಬೇಕಾಗಿದೆ ಎಂದರು.

ಪೋಷಕರು ಮಕ್ಕಳಿಗೆ ಚಿಕ್ಕವಯಸ್ಸಿನಿಂದಲೇ ಕಥೆ, ವಿಜ್ಞಾನ, ಜೀವನ ಮೌಲ್ಯಗಳ ಪುಸ್ತಕಗಳನ್ನು ಪರಿಚಯಿಸಬೇಕು. ಪುಸ್ತಕವು ನಮ್ಮ ಜೀವನಕ್ಕೆ ಪೌಷ್ಟಿಕ ಆಹಾರವಾದರೆ, ಮೊಬೈಲ್ ಕೇವಲ ಉಪ್ಪಿನಕಾಯಿ ಇದ್ದಂತೆ. ಉತ್ತಮ ಪುಸ್ತಕಗಳಿಲ್ಲದೆ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುವುದಿಲ್ಲ. ಮೊಬೈಲ್ ಬಳಕೆ ಅಗತ್ಯವಾದರೂ ಅದು ಮಿತಿಯಲ್ಲಿರಬೇಕು. ಆದರೆ ಪುಸ್ತಕ ಓದುವ ಅಭ್ಯಾಸ ಜೀವನಪೂರ್ತಿ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳನ್ನು ನೀಡುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಸದಸ್ಯ ಲಕ್ಷ್ಮೀಪತಿ, ನಮ್ಮ ಅಭ್ಯಾಸಗಳೇ ನಮ್ಮ ಜೀವನವನ್ನು ರೂಪಿಸುತ್ತವೆ. ಪುಸ್ತಕ ಓದುವ ಹವ್ಯಾಸವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ಬೆಳೆಸುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಲ್ಲಿ ಪುಸ್ತಕ ಪ್ರೀತಿ ಬೆಳೆಸಿಕೊಳ್ಳಲು ಹೆಚ್ಚು ಪ್ರೋತ್ಸಾಹ ನೀಡಬೇಕಾಗಿದೆ ಎಂದರು.

ಗ್ರಂಥಾಲಯ ಜಾಗೃತ ಸಮಿತಿಯ ಸದಸ್ಯರಾದ ಪ್ರಮೀಳಾ ಮಹಾದೇವ್, ರಬ್ಬನಹಳ್ಳಿ ಕೆಂಪಣ್ಣ, ನೆಲಮಂಗಲದ ಗೌಹರ್ ಜಾನ್, ನಂ.ಮಹಾದೇವ್, ನಾಗರಾಜು, ಚಿದಾನಂದ್, ಸೈಕ್ಲಿಂಗ್ ಕ್ರೀಡಾಪಟು ಆರ್.ಪಿ.ರಘೋತ್ತಮ್, ಗಿರೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-15-46541161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.