ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘವು 2026ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ರಾಜಶೇಖರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ನೀಡಲಾಗುವ ಪ್ರತಿಭಾ ಪುರಸ್ಕಾರಕ್ಕೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕಿದ್ದು, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಾಗಿರಬೇಕು. ಅರ್ಜಿ ಸಲ್ಲಿಕೆಗೆ ಅಗತ್ಯ ಮಾಹಿತಿಯನ್ನು https://powermedia.info ವೆಬ್ಸೈಟ್ನಲ್ಲಿ ಪಡೆಯಬಹುದು.

ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ, ಅಂಕಪಟ್ಟಿ, ಸೇವಾ ದೃಢೀಕರಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಚೇರಿ ದೂರವಾಣಿ ಸಂಖ್ಯೆ 080-22354783/84 ಅನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-15-480773317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.