ದೊಡ್ಡಬಳ್ಳಾಪುರ: ಇಲ್ಲಿನ ಲಾವಣ್ಯ ಶಿಕ್ಷಣ ಮಹಾವಿದ್ಯಾಲಯದಿಂದ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದದಲ್ಲಿ ಬಿ.ಇಡಿ ವಿದ್ಯಾರ್ಥಿಗಳಿಗಾಗಿ ನಡೆದ ನಾಲ್ಕು ದಿನಗಳ ಸಮುದಾಯ ಜೀವನ ಶಿಬಿರ ನಡೆಯಿತು.

ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ ಮಾತನಾಡಿ, ಶಿಕ್ಷಕರಾಗುತ್ತಿರುವ ಪ್ರಶಿಕ್ಷಣಾರ್ಥಿಗಳು ಸಾಮಾಜಿಕ ಕಳಕಳಿ ಹೊಂದಿರಬೇಕು. ತಮ್ಮ ವರ್ತನೆ ಹಾಗೂ ಸ್ವಭಾವಗಳನ್ನು ಮಕ್ಕಳು ಅನುಸರಿಸುವುದರಿಂದ ನಿಮ್ಮ ವ್ಯಕ್ತಿತ್ವ ಸರಿಯಾಗಿ ರೂಪಿಸಿಕೊಳ್ಳಬೇಕು. ಪರಿಸರದ ಬಗ್ಗೆ ಕಾಳಜಿ ಹೊಂದಿರಬೇಕು ಎಂದು ಸಲಹೆ ನೀಡಿದರು.

ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಪಂಕಜ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೆ ಕೆಲಸದ ಸಮಯದಲ್ಲಿ ಮಹಿಳೆಯರು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತಿರುವುದು ಕಂಡು ಬರುತ್ತಿದೆ. ಇದನ್ನು ತಡೆಯಲು ಪೋಕ್ಸೋ ಕಾಯ್ದೆ ಜಾರಿಗೆ ಬಂದಿದೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರಿಗೆ ಸುರಕ್ಷತೆ ಒದಗಿಸಲು ಭಾರತದಲ್ಲಿ ಪ್ರಮುಖ ಕಾನೂನುಗಳಿದ್ದು, ದೈಹಿಕ, ಲೈಂಗಿಕ, ಆರ್ಥಿಕ ಮತ್ತು ಭಾವನಾತ್ಮಕ ಕಿರುಕುಳದಿಂದ ರಕ್ಷಣೆ ನೀಡುತ್ತದೆ. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಕುಟುಂಬದೊಳಗೆ ನಡೆಯುವ ದೌರ್ಜನ್ಯ, ವರದಕ್ಷಿಣೆ ಕಿರುಕುಳದ ವಿರುದ್ಧ ರಕ್ಷಣೆ ಮತ್ತು ಆರ್ಥಿಕ ಪರಿಹಾರ ಒದಗಿಸುತ್ತದೆ ಎಂದು ತಿಳಿಸಿದರು.

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಪರಿಣಾಮಕಾರಿಯಾಗಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಕಾನೂನು ನೆರವು, ತಾತ್ಕಾಲಿಕ ಆಶ್ರಯ ಮತ್ತು ಕೌನ್ಸೆಲಿಂಗ್ ಒದಗಿಸುತ್ತದೆ. ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಸಂತ್ರಸ್ತರಿಗೆ ಸಹಾಯ ಮಾಡಲು ಪ್ರತಿ ಜಿಲ್ಲೆಯಲ್ಲೂ ನೇಮಕಗೊಂಡಿದ್ದು, ಈ ಬಗ್ಗೆ ಮಹಿಳೆಯರಿಗೆ ಅರಿವಿರಬೇಕು ಎಂದರು.

ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಯನ್ನು ಬಳಸಿಕೊಳ್ಳಬೇಕು ಮತ್ತು ಶಿಕ್ಷಕರಾಗುವವರು ಶಾಲಾ ಮಟ್ಟದಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು.

ಶ್ರೀರಾಮ ಆಸ್ಪತ್ರೆ ವೈದ್ಯ ಡಾ.ಎಚ್.ಜಿ.ವಿಜಯಕುಮಾರ್ ಮಾತನಾಡಿದರು. ಲಾವಣ್ಯ ಶಿಕ್ಷಣ ಮಹಾವಿದ್ಯಾಲಯದ ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡ, ಕಾಲೇಜಿನ ಪ್ರಾಂಶುಪಾಲ ಜಿ.ಕೃಷ್ಣಮೂರ್ತಿ,ಉಪನ್ಯಾಸಕರು ಹಾಗೂ ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-15-2104274974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.