ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸಿಪಿಐಎಂ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಡಾ.ಆರ್.ಬಿ.ಅಂಬೇಡ್ಕರ್ ಪ್ರತಿಮೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನೀಟ್ ಪತ್ರಿಕೆ ಸೋರಿಕೆಯಾಗಿರುವುದು ವ್ಯವಸ್ಥೆಯ ಲೋಪಕ್ಕೆ ಹಿಡಿದ ಕನ್ನಡಿಯಾಗಿದೆ. ಇದರಿಂದ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳುವ ಆಕಾಂಕ್ಷೆ ಇಟ್ಟುಕೊಂಡಿದ್ದ ವಿದ್ಯಾರ್ಥಿಗಳಿಗೆ ಇದರಿಂದ ಆಘಾತ ಉಂಟಾಗಿದೆ. ವರ್ಷಾನುಗಟ್ಟಲೆ ಕಟ್ಟಪಟ್ಟ ವಿದ್ಯಾರ್ಥಿಗಳ ಅವಿರಥ ಶ್ರಮ ವ್ಯರ್ಥವಾಗಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ನರಸಿಂಹಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶ್ರಮವಹಿಸಿದ ಪೋಷಕರು ಕಂಗಾಲಾಗಿದ್ದಾರೆ. ಆಘಾತದಿಂದ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ರಾಧಾಕೃಷ್ಣನ್ ಸಮಿತಿ ಪರೀಕ್ಷೆಗಳನ್ನು ನಡೆಸುವಲ್ಲಿ ನೀಡಿದ ಶಿಫಾರಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ನೀಟ್ ರದ್ದುಗೊಳಿಸಬೇಕು. ಶಿಕ್ಷಣ ನೀಡುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನ ರಕ್ಷಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಇಲ್ಲವೇ ಪ್ರಧಾನಿ ಮೋದಿ ಕೇಂದ್ರ ಶಿಕ್ಷಣ ಸಚಿವರನ್ನು ಈ ತಕ್ಷಣ ವಜಾ ಗೊಳಿಸಬೇಕೆಂದು ಆಗ್ರಹಿಸಿದರು.

2013 ರಿಂದ ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಪರೀಕ್ಷೆ ಪತ್ರಿಕೆಗಳ ಸೋರಿಕೆ ತಡೆಗಟ್ಟುವಲ್ಲಿ ವಿಫಲವಾಗಿದೆ. ಈ ಬಗ್ಗೆ ಪ್ರಧಾನಿ ಮೌನವಹಿಸಿದ್ದಾರೆ. ಇವರೆಲ್ಲ ಮಕ್ಕಳ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆ ಎಂದು ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಆರ್.ಚಂದ್ರತೇಜಸ್ವಿ ಕಿಡಿಕಾರಿದರು.

ಚೀನಾದಲ್ಲಿ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸೈನ್ಯದ ರಕ್ಷಣೆಯಲ್ಲಿ ನಡೆಯುತ್ತವೆ. ಒಂದು ವೇಳೆ ಅಕ್ರಮ ಎಸಗಿದರೆ ತಕ್ಷಣವೇ ಏಳು ವರ್ಷ ಜೈಲು ಶಿಕ್ಷೆಯಗುತ್ತದೆ. ಕ್ಯೂಬಾದಂತಹ ಚಿಕ್ಕ ದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಆದರೆ ನಮ್ಮ ದೇಶದಲ್ಲಿ ಶಿಕ್ಷಣ ವ್ಯಾಪಾರೀಕರಣ ಆಗಿರುವುದು ದುರಂತ ೆಂದು ಬೇಸರಿಸಿದರು.

ಇಂತಹ ಅಕ್ರಮಗಳಿಗೆ ಕಡಿವಾಣ ಹಾಕದಿದ್ದರೆ ಬಡ ಹಾಗೂ ಮಧ್ಯಮ ವರ್ಗದವರು ಉನ್ನತ ಶಿಕ್ಷಣ ಕನಸಾಗಿ ಉಳಿಯುತ್ತದೆ. ಕೂಡಲೇ ಪ್ರಕರಣದ ತನಿಖೆ ನಡೆಸಿ ಅಕ್ರಮವೆಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ಎಸ್.ರುದ್ರಾರಾಧ್ಯ, ಜಿಲ್ಲಾ ಸಮಿತಿ ಸದಸ್ಯರಾದ ಪಿ.ಎ.ವೆಂಕಟೇಶ್, ಮೋಹನ್ ಬಾಬು, ಪ್ರಭಾಬೆಳವಂಗಲ, ತಾಲ್ಲೂಕು ಸಮಿತಿ ಸದಸ್ಯರಾದ ರೇಣುಕಾರಾಧ್ಯ, ನಟರಾಜ್, ರಘುಕುಮಾರ್, ಚೌಡಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-15-865738183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.