ದೊಡ್ಡಬಳ್ಳಾಪುರ: ರಾಜ್ಯದಲ್ಲಿ 2034ರ ವೇಳೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಖ್ಯೆಯನ್ನು 15 ಲಕ್ಷಕ್ಕೆ ಮುಟ್ಟುವ ಗುರಿ ಹೊಂದಲಾಗಿದೆ. ಇದಕ್ಕೆ ಪೂರಕವಾಗಿ, ನಾಯಕತ್ವ ತರಬೇತುದಾರು ಹಾಗೂ ಕಚೇರಿಗಳನ್ನು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಹೇಳಿದರು.

ನಗರದ ಅನಿಬೆಸೆಂಟ್ ಪಾರ್ಕ್ನಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆರಂಭಗೊಂಡ ಮೂರು ದಿನಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿಷನ್-2034 (ದೂರದೃಷ್ಠಿ) ಸಮಾಲೋಚನಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

2034ಕ್ಕೆ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯಾವ ಪ್ರಮಾಣದಲ್ಲಿ ಬೆಳೆಯಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುತ್ತದೆ. ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ. ಇದನ್ನು ನಮ್ಮ ಬೆಳವಣಿಗೆಗೆ ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯವಾಗುತ್ತದೆ. ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ರಾಜ್ಯದಲ್ಲಿ ಸದ್ಯ 8.65ಲಕ್ಷ ವಿದ್ಯಾರ್ಥಿಗಳಿದ್ದು, ರಾಜ್ಯದಾದ್ಯಂತ 2 ಕೋಟಿ ವಿದ್ಯಾರ್ಥಿಗಳು ಇದ್ದಾರೆ. ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕಿದೆ ಎಂದರು.

2034ಕ್ಕೆ 15 ಲಕ್ಷ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಇರುವಂತೆ ಕೆಲಸ ಮಾಡಬೇಕಿದೆ. ರಾಜ್ಯದ 200 ತಾಲ್ಲೂಕುಗಳಲ್ಲಿ ಒಬ್ಬ ತರಬೇತುದಾರರು ಇರುವಂತೆ ಅಗತ್ಯವಾದ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಎಸ್ಎಸ್ಎಲ್ಸಿಗೆ ತೊಡಕ್ಕಲ್ಲ: ಎಸ್ಎಎಸ್ಎಲ್ಸಿ ಪರೀಕ್ಷೆಯ ಕಾರಣ ನೀಡಿ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ವಿದ್ಯಾರ್ಥಿಗಳನ್ನು ವಿಮುಖರನ್ನಾಗಿಸಲಾಗುತ್ತಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯೂ ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರವು ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾರು ಕೂಡ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿಲ್ಲ.ಸಾಕಷ್ಟು ವಿದ್ಯಾರ್ಥಿಗಳು ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. ಪಿಯುಸಿಯಲ್ಲೂ ಕೂಡ ಅನೇಕ ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ ಎಂದು ಪಿ.ಜಿ.ಆರ್ ಸಿಂಧ್ಯ ತಿಳಿಸಿದರು.

ಸಾಮಾಜಿಕ ಬದಲಾವಣೆಯ ಅಸ್ತ್ರ: ಪ್ರತಿ ಜಿಲ್ಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸುಸಜ್ಜಿತ ಕಚೇರಿಗಳು ನಿರ್ಮಾಣವಾಗಬೇಕಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಸಾಮಾಜಿಕ ಬದಲಾವಣೆಯ ಅಸ್ತ್ರವಾಗಬೇಕಿದ್ದು, ಸೇವೆ ಮತ್ತು ಸಮಾಜದಲ್ಲಿ ನಾಯಕತ್ವ ತೆಗೆದುಕೊಳ್ಳಬೇಕಿದೆ. ಆದರೆ ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿಗೆ ಕನಿಷ್ಠ ಸಂಬಳ ನೀಡುತ್ತಿದ್ದರೂ ಅವರು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. ಇಡೀ ದೇಶದಲ್ಲಿ ನಡೆಯುತ್ತಿರುವ 2034ರ ದೂರದೃಷ್ಟಿ ಕಾರ್ಯಾಗಾರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬಲವರ್ಧನೆಗೆ ಪೂರಕವಾದ ಸಮಾಲೋಚನೆಗಳು ನಡೆಯಲಿವೆ ಎಂದರು.

ವಿಪತ್ತು ನಿರ್ವಹಣಾ ತರಬೇತಿ:ಆಪತ್ತು ಮಿತ್ರ ಪುಸ್ತಕದ ಮೂಲಕ ಕೇಂದ್ರ ಸರ್ಕಾರವೂ ರಾಷ್ಟ್ರೀಯ ವಿಪತ್ತಿನ ಸಮಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ವಿಪತ್ತು ನಿರ್ವಹಣೆ ತರಬೇತಿ ಪಡೆದವರು ಹೇಗೆ ಕೆಲಸ ಮಾಡಬೇಕು ಎಂದು ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದಿಂದ ಈ ಪುಸ್ತಕ ಬಿಡುಗಡೆ ಮಾಡಲಾಗಿದೆ.12 ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣೆ ತರಬೇತಿ ನೀಡಲಾಗಿದೆ. ಈ ವರ್ಷ ದಾನಿಗಳ ಸಹಕಾರದೊಂದಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕೇಂದ್ರ ತೆರೆಯಲಾಗುತ್ತಿದೆ. ಕೆಂದ್ರ ಸರ್ಕಾರದ ಆಪದ್ ಮಿತ್ರ ಯೋಜನೆಗೆ ಸಹಕಾರ ನೀಡಲಾಗುತ್ತಿದ್ದು, ಪ್ರಾಕೃತಿಕ ವಿಕೋಪಗಳಾದಾಗ ಸ್ಕೌಟ್ಸ್ ಮತ್ತು ಗೈಡ್ಸ್ ನೆರವಾಗುತ್ತಿದೆ ಎಂದು ಸಿಂಧ್ಯ ತಿಳಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಹೆಚ್ಚುವರಿ ರಾಷ್ಟ್ರೀಯ ಮುಖ್ಯ ಆಯುಕ್ತ ಎಂ.ಎ.ಖಾಲಿದ್ ಕಾರ್ಯಾಗಾರದ ಮಹತ್ವ ವಿವರಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಾಮಾಜಿಕ ಸೇವಾ ಕಾರ್ಯ ಹಾಗೂ ಶಿಸ್ತುಬದ್ದ ಜೀವನ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ನಮ್ಮ ಮುಂದಿನ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ ಎಂದರು.

ಸಹಾಯಕ ನಿರ್ದೇಶಕ ಅವಲೇಂದ್ರ ಶರ್ಮ ಕಾರ್ಯಾಗಾರದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷ ಮಹೇಶ್, ಶರ್ಮ, ಕಾರ್ಯಾಗಾರದ ಸಂಯೋಜಕ ಮಧುಸೂಧನ್, ಜಿಲ್ಲಾ ಆಯುಕ್ತರುಗಳಾದ ನಾಗರಾಜ್, ವಿಶ್ವನಾಥ್, ಶಕುಂತಲಾ, ಆಶಾ ಪ್ರಸನ್ನ ಕುಮಾರ್, ರಾಧಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-15-1281918918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.