ಶನಿವಾರಸಂತೆ: ಇಲ್ಲಿಗೆ ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಯ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯದಲ್ಲಿ ‘ವಿಶ್ವ ಪುಸ್ತಕ ದಿನ’ ವನ್ನು ಈಚೆಗೆ ಆಚರಿಸಲಾಯಿತು.

ದಿನದ ಮಹತ್ವ ಕುರಿತು ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ.ದಿವ್ಯಾ ಮಾತನಾಡಿ, ‘ಪುಸ್ತಕವು ಜ್ಞಾನದ ಕಣಜವಾಗಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನದ ಸಂಪಾದನೆ ಮಾಡಬೇಕು. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಜೊತೆಯಲ್ಲಿ ತಮ್ಮ ಸ್ನೇಹಿತರಿಗೂ ಪುಸ್ತಕವನ್ನು ಓದುವಂತೆ ಪ್ರೇರಿಪಿಸಬೇಕು’ ಎಂದರು.

ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳಲು ಪುಸ್ತಕದ ಓದು ಮಹತ್ವದ ಪಾತ್ರ ವಹಿಸುತ್ತದೆ. ಸಂಸ್ಕಾರ, ನಡೆನುಡಿ ಸೇರಿದಂತೆ ಆಧುನಿಕ ಮತ್ತು ವೈಜ್ಞಾನಿಕ ವಿಚಾರಗಳ ಬಗ್ಗೆಯೂ ತಿಳಿದುಕೊಳ್ಳಬಹುದು. ಜೀವನ ನಡೆಸಲು ಮತ್ತು ಸಾಧನೆ ಮಾಡಲು ಸಹ ಪುಸ್ತಕಗಳು ಸಹಕಾರಿಯಾಗುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಪುಸ್ತಕದ ಪ್ರೇಮಿಯಾಗಿ ತನ್ನ ಜ್ಞಾನವನ್ನು ವೃದ್ದಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಂಥಾಲಯದ ಓದುಗರು, ವಿದ್ಯಾರ್ಥಿಗಳು, ಯುವಕ ಯುವತಿಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-51-469491150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.