ಬೆಂಗಳೂರು: ಪರೀಕ್ಷೆಯನ್ನು ಎದುರಿಸುವ ವಿದ್ಯಾರ್ಥಿಗಳ ಸಮಯ ನಿರ್ವಹಣೆ ಮತ್ತು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಸಿದ್ಧಗೊಳಿಸಲು ಉಚಿತ ಆನ್‌ಲೈನ್ ಕಾರ್ಯಾಗಾರವನ್ನು ಎಡುಕೆಫೆ ಆಯೋಜಿಸಿದೆ.
ಅರ್ಧವಾರ್ಷಿಕ ಪರೀಕ್ಷೆಗಳನ್ನು ಸುಲಭವಾಗಿ ನಿಭಾಯಿಸಲು ವಿದ್ಯಾರ್ಥಿಗಳನ್ನು ಸಶಕ್ತಗೊಳಿಸುವುದು ಇದರ ಉದ್ದೇಶವಾಗಿದೆ. ಈ ಕುರಿತು ಡಾ. ಸುಧಾ ಭೋಗ್ಲೆ ಮಾಹಿತಿ ನೀಡಿದ್ದಾರೆ.
'ಎಡುಕೆಫೆ (Educafe)' 20 ವರ್ಷಗಳಿಂದ ಶಿಕ್ಷಣ, ವೃತ್ತಿ ಸಮಾಲೋಚನೆ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸಮಾಡುವ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ. ಈ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಸಮಯ ನಿರ್ವಹಣೆ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಲು ಉಚಿತ ಕಾರ್ಯಾಗಾರವನ್ನು ಅವರ ಹಿತದ ದೃಷ್ಟಿಯಿಂದ ಉಚಿತವಾಗಿ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಅನೇಕ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ತಮ್ಮ ಸಮಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ವಿಫಲವಾಗುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅವರನ್ನು ಬಾಧಿಸುವ ಒತ್ತಡ ಮತ್ತು ಆತಂಕ. ಅವರು ಎದುರಿಸುತ್ತಿರುವ ಒತ್ತಡವನ್ನು ಅರ್ಥಮಾಡಿಕೊಂಡು, ಎಡುಕೆಫೆ ಸಮಗ್ರ ಕಾರ್ಯಾಗಾರದೊಂದಿಗೆ ಪರಿಹಾರವನ್ನು ನೀಡಲು ಮುಂದಾಗಿದೆ. ಸಮಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಜೊತೆಗೆ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಲು ಸಜ್ಜಾಗುವಂತೆ ನಾವು ಈ ಕಾರ್ಯಗಾರವನ್ನು ವಿನ್ಯಾಸಗೊಳಿಸಿದ್ದೇವೆ ಎಂದು ಹೇಳಿದ್ದಾರೆ.
ಯಾರು ಸೇರಬಹುದು?
60 ನಿಮಿಷಗಳ, ಉಚಿತ, ಆನ್‌ಲೈನ್ ಕಾರ್ಯಾಗಾರವು 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ತಮ್ಮ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಬಯಸುವ ಯಾವುದೇ ಪಠ್ಯಕ್ರಮದ ವಿದ್ಯಾರ್ಥಿಗಳು ಇದರ ಉಪಯೋಗವನ್ನು ಪಡೆಯಬಹುದು. ಕಾರ್ಯಾಗಾರವನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ನಡೆಸಲಾಗುವುದು.
ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ನೋಂದಾಯಿತ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರತ್ಯೇಕ ಆನ್‌ಸೈಟ್ ತರಬೇತಿ ನೀಡಲು ಎಡುಕೆಫೆ ಸಿದ್ಧವಿದೆ.
ನೋಂದಣಿ ಹೇಗೆ?
ಈ ಉಚಿತ ಆನ್‌ಲೈನ್ ಕಾರ್ಯಾಗಾರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು [080–41244184 / +91 9845584360] ಫೋನ್ ಮೂಲಕ ಸಂಪರ್ಕಿಸಬಹುದಾಗಿದೆ. ಅವಕಾಶಗಳು ಸೀಮಿತವಾಗಿದೆ. ಆರಂಭಿಕ ನೋಂದಣಿಯನ್ನು ಪ್ರೋತ್ಸಾಹಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.