ಕೆ.ಆರ್.ಪುರ: ದೇಶದಲ್ಲಿ ಪ್ರತಿವರ್ಷ ಸುಮಾರು 50 ಲಕ್ಷ ಪದವೀಧರರು ಹೊರಬರುತ್ತಿದ್ದು, ಅದರಲ್ಲಿ ಕೇವಲ ಶೇ 30ರಷ್ಟು ಮಂದಿ ಮಾತ್ರ ಉದ್ಯೋಗಕ್ಕೆ ಅರ್ಹರಾಗುತ್ತಿದ್ದಾರೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಕಳವಳ ವ್ಯಕ್ತಪಡಿಸಿದರು.

ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯಲ್ಲಿ (ಸ್ವಾಯತ್ತ ಸಂಸ್ಥೆ) ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಎಂಬಿಎ, ಎಂಸಿಎ ಮತ್ತು ಎಂ.ಟೆಕ್ನ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಇಂದಿನ ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ ಕೌಶಲಗಳು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಲ್ಲವಾಗಿದೆ. ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಅಸಂಖ್ಯಾತ ಉದ್ಯೋಗಗಳು ಲಭ್ಯವಿವೆ. ಆದರೆ, ಅದಕ್ಕೆ ಬೇಕಾದ ಕೌಶಲಗಳು ಇಂದಿನ ಪದವೀಧರರಲ್ಲಿ ಇಲ್ಲವಾಗಿದೆ. ಆದ್ದರಿಂದ ನಮ್ಮ ಶಿಕ್ಷಣ ವ್ಯವಸ್ಥೆಯು ಬದಲಾಗಬೇಕಾಗಿದೆ’ ಎಂದು ಕರೆ ನೀಡಿದರು.

ಕೇಂಬ್ರಿಡ್ಜ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಿ.ಕೆ. ಮೋಹನ್, ಪ್ರಾಂಶುಪಾಲ ಬಿ.ವಿ. ರವಿಶಂಕರ್, ಕೆ.ಎನ್.ಬಾಲಸುಬ್ರಹ್ಮಣ್ಯ ಮೂರ್ತಿ, ಇಂದುಮತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತಿನ್ ಮೋಹನ್, ಉಪ ಪ್ರಾಂಶುಪಾಲ ನಾಗೇಶ್, ಡೀನ್ ಸುಬ್ರಮಣ್ಯ ಕಟ್ಟೆ, ಶಿವಪಂಚಾಕ್ಷರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-4-1620172983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.