ಬೆಂಗಳೂರು: ರಾಜ್ಯ ಸರ್ಕಾರವು ತರಾತುರಿಯಲ್ಲಿ ಹಾಗೂ ಏಕಪಕ್ಷೀಯವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಗೊಳಿಸುತ್ತಿರು ವುದನ್ನು ಖಂಡಿಸಿ ವಿಜ್ಞಾನಿಗಳು ಹಾಗೂ ಶಿಕ್ಷಣ ತಜ್ಞರು ಸೇರಿ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಎಲ್ಲಾ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

‘ಸರ್ಕಾರವು ನೂತನ ಶಿಕ್ಷಣ ನೀತಿಯ ಅನುಷ್ಠಾನ ನಿರ್ಧಾರವನ್ನು ಕೂಡಲೇ ಕೈಬಿಡಬೇಕು.ಬೋಧನೆ ಹಾಗೂ ಜ್ಞಾನಾರ್ಜನೆಗೆ ಮಾರಕವಾ ಗಿರುವ ಬಹು ಶಿಸ್ತೀಯ ಪದ್ಧತಿ ಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಕರ್ನಾಟಕ) ರಾಜ್ಯ ಘಟಕದ ಅಧ್ಯಕ್ಷ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಒತ್ತಾಯಿಸಿದ್ದಾರೆ.

‘ರಾಜ್ಯ ಸರ್ಕಾರವು ಪ್ರಜಾತಾಂ ತ್ರಿಕ ಚರ್ಚೆಗಳಿಲ್ಲದೆ ಇದನ್ನು ಪದ ವಿ ಹಂತದಲ್ಲಿ ಜಾರಿಗೊಳಿಸಲು ಮುಂ ದಾಗಿದೆ. ಸಾರ್ವಜನಿಕರು, ಶಿಕ್ಷಣ ತಜ್ಞರು ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ಬಡ ವಿದ್ಯಾರ್ಥಿಗಳು ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಹೊಂದಿರುವ ಎಲ್ಲಾ ಶಾಸಕರು ಅಧಿವೇಶನದಲ್ಲಿ ನೂತನ ಶಿಕ್ಷಣ ನೀತಿಯನ್ನು ವಿರೋಧಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.