ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಆಕಾಂಕ್ಷೆ ಇದ್ದರೂ ನಾನಾ ಕಾರಣಗಳಿಂದ ಅದು ಸಾಧ್ಯವಾಗುತ್ತಿರುವುದಿಲ್ಲ. ಅಂತಹವರ ಬಯಕೆಯನ್ನು ಈಡೇರಿಸಲಿವೆ, ನಮ್ಮ ರಾಜ್ಯದಲ್ಲೇ ಆರಂಭವಾಗಲಿರುವ ಹಲವು ವಿದೇಶಿ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳು
ಕರ್ನಾಟಕದಲ್ಲಿ ಆರಂಭವಾಗುವ ವಿದೇಶಿ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲು ಒಲವು ವ್ಯಕ್ತವಾಗಿದೆ. ಇದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳ ಮಕ್ಕಳೂ ವಿದೇಶಿ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದೇಶಗಳಲ್ಲಿ ಉದ್ಯೋಗ ಹೊಂದಲು ದಾರಿ ಸುಗಮವಾಗಲಿದೆ.