ಗದಗ: ನಗರದ ಆದರ್ಶ ಶಿಕ್ಷಣ ಸಮಿತಿಯ ಲಕ್ಷ್ಮಣರಾವ್ ಅನಂತರಾವ್ ಪೊತ್ನೀಸ್ ಮೆಮೊರಿಯಲ್ ಬಿಬಿಎ ಮತ್ತು ಬಿಸಿಎ ಕಾಲೇಜು, ಐ.ಕ್ಯೂ.ಎ.ಸಿ ಅಡಿಯಲ್ಲಿ 2025–26ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಬುಧವಾರ ನಡೆಯಿತು.

ಮುಳಗುಂದದ ಪ್ರಗತಿಪರ ಕೃಷಿಕ ಮಹಿಳೆ ಮಂಗಳ ಕಿರಣ ನೀಲಗುಂದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಆದಾಯ ಗಳಿಸುವಲ್ಲಿಯೂ ಗಮನ ಹರಿಸಬೇಕು ಎಂದರು

ಕೃಷಿ ಕ್ಷೇತ್ರದಲ್ಲಿನ ವಿವಿಧ ಆದಾಯ ಮೂಲಗಳ ಬಗ್ಗೆ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಬಿ.ಬಿ.ಎ ಮತ್ತು ಬಿ.ಸಿ.ಎ. ವಿದ್ಯಾರ್ಥಿಗಳಿಗೆ ತಿಳಿಸಿದರು.

‘ವಿದ್ಯಾರ್ಥಿಗಳು ಎಲ್ಲ ವಿಷಯಗಳ ಬಗ್ಗೆ ಸಕಾರತ್ಮಕವಾಗಿ ಯೋಚಿಸಬೇಕು ಮತ್ತು ಕಾಲೇಜಿನ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಿ ಪರಿಪೂರ್ಣ ವ್ಯಕ್ತಿತ್ವವನ್ನು ಬೆಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಆದರ್ಶ ಶಿಕ್ಷಣ ಸಮಿತಿಯ ಉಪಾಧ್ಯಕ್ಷ ಪಿ.ಆರ್.ಅಡವಿ ಮಾತನಾಡಿ, ‘ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯ, ಅಧ್ಯಯನ ಕೊಠಡಿ ಮತ್ತು ಇತರ ಸೌಲಭ್ಯಗಳನ್ನು ಸದ್ಬಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಪಠ್ಯ ಮತ್ತು ಪಠ್ಯೆತರ ಚಟುವಟಿಕೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಆದರ್ಶ ಸಮಿತಿಯ ಚೇರ್ಮನ್ ಎ.ಎಲ್.ಪೊತ್ನೀಸ್, ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಖಿಂಡಿ, ಪ್ರಾಚಾರ್ಯ ಲಿಂಗರಾಜ ರೇಶ್ಮಿ, ಅಶ್ವಿನಿ ಹೊಸಮನಿ, ರೇಣುಕಾ ಅಗಸನಕೊಪ್ಪ, ನೇತ್ರಾವತಿ ಹೂಗಾರ, ಆದಿತ್ಯಾ ಜೋಶಿ, ಏಂಜೆಲ್ ಗೊಕಾವಿ, ಪಿಯು ಕಾಲೇಜಿನ ಪ್ರಾಚಾರ್ಯ ಆರ್. ಆರ್. ಕುಲಕರ್ಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-1528835498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.