ಗದಗ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಕ್ರಮವನ್ನು ಎಐಡಿಎಸ್ಒ ಗದಗ ಜಿಲ್ಲಾ ಘಟಕದ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಸಂಚಾಲಕಿ ಎಂ.ಶಾಂತಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಧರಿಸುವ ಯಾವುದೇ ವೈಯಕ್ತಿಕ ಧಾರ್ಮಿಕ ಚಿಹ್ನೆಗಳನ್ನು ತೆಗೆಸಬಾರದು ಎಂದು ಕೆಇಎ ಮಾರ್ಗಸೂಚಿಗಳಿದ್ದರೂ ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ್ದಾರೆ. ಜೊತೆಗೆ, ಒಂದು ಕಡೆ ಜನಿವಾರವನ್ನು ಬಲವಂತದಿಂದ ಕಿತ್ತು ಹಾಕಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆಗಳು ನಡೆದಿದ್ದವು ಎಂದು ಕಿಡಿಕಾರಿದ್ದಾರೆ.

ಖಾಸಗಿ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲೇ ಧಾರ್ಮಿಕ ಹಬ್ಬಗಳು ಮತ್ತು ಚಟುವಟಿಕೆಗಳು ಬಹಿರಂಗವಾಗಿ ನಡೆಯುತ್ತಿರುವಾಗ, ವಿದ್ಯಾರ್ಥಿಗಳ ವೈಯಕ್ತಿಕ ನಂಬಿಕೆಗಳ ಮೇಲೆ ದಾಳಿ ಮಾಡುವುದು ಅವರಲ್ಲಿ ಆಳವಾದ ಮಾನಸಿಕ ಆಘಾತ ಉಂಟುಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ವಿಷಯಗಳಲ್ಲಿ ಧರ್ಮವನ್ನು ಗುರುತಿಸದಿರುವುದು ಅಥವಾ ಪ್ರೋತ್ಸಾಹಿಸದಿರುವುದೇ ನಿಜವಾದ ಧರ್ಮನಿರಪೇಕ್ಷ ರಾಷ್ಟ್ರದ ಲಕ್ಷಣವಾಗಿದೆ. ಸ್ವಾಮಿ ವಿವೇಕಾನಂದರು ಕೂಡ ಇದನ್ನೇ ಹೇಳಿದ್ದರು. ಆದರೂ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇದು ಎಗ್ಗಿಲ್ಲದೆ ನಡೆಯುತ್ತಿದೆ ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳನ್ನು ಗುರಿಪಡಿಸಲಾಗುತ್ತಿದೆ. ಇದೆಲ್ಲವೂ ಹಿಜಾಬ್ ವಿವಾದದೊಂದಿಗೆ ಪ್ರಾರಂಭವಾಯಿತು.

ನಾಲ್ಕು ವರ್ಷಗಳ ಹಿಂದೆ ಯುವತಿಯರನ್ನು ಹಿಜಾಬ್ ಧರಿಸಿದ್ದಕ್ಕಾಗಿ ಗುರಿಪಡಿಸಲಾಯಿತು ಮತ್ತು ಅವರ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸಲಾಯಿತು. ಆ ಘಟನೆಯನ್ನು ನೈಜ ಧರ್ಮ ನಿರಪೇಕ್ಷ ತತ್ವಗಳೊಂದಿಗೆ ನಿರ್ವಹಿಸದ ಕಾರಣ, ಅದರ ಪರಿಣಾಮವು ಇಂದು ಇತರ ಧರ್ಮಗಳ ವಿದ್ಯಾರ್ಥಿಗಳ ವಿಷಯದಲ್ಲೂ ಮರುಕಳಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮಧ್ಯಪ್ರವೇಶಿಸಿ, ಯುವ ವಿದ್ಯಾರ್ಥಿಗಳ ಮನಸ್ಸನ್ನು ಘಾಸಿಗೊಳಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-23-1539357493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.