ಗದಗ: ‘ಮಕ್ಕಳ ಮನೋವಿಕಾಸಕ್ಕೆ ಸಾಹಿತ್ಯ ಪೂರಕವಾಗಿದ್ದು, ಮಕ್ಕಳ ಕಲಿಕೆ ಕತೆ, ಹಾಡುಗಳ ಮೂಲಕ ಮನೆಯಿಂದಲೇ ಪ್ರಾರಂಭವಾಗುತ್ತಿತ್ತು. ಆದರೆ, ಇಂದು ಮಕ್ಕಳ ಸಾಹಿತ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ’ ಎಂದು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಂದ್ರ ಗಡಾದ ಹೇಳಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ನಡೆದ ಶಿಕ್ಷಕ ದಂಪತಿ ಅನ್ನಪೂರ್ಣದೇವಿ ಹಾಗೂ ಸಿದ್ಧಲಿಂಗಯ್ಯ ವಸ್ತ್ರದ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಶಿಕ್ಷಕರು ಮಕ್ಕಳ ಜತೆಗೆ ಉತ್ತಮ ಸಾಂಗತ್ಯ ಹೊಂದಿ ಅವರ ಅಭಿರುಚಿ, ಆಸಕ್ತಿಗೆ ಅನುಗುಣವಾಗಿ ಸಾಹಿತ್ಯ ರಚಿಸಿದ್ದಾರೆ. ಈ ಮೂಲಕ ಜೀವನಮೌಲ್ಯಗಳನ್ನು ಮಕ್ಕಳಲ್ಲಿ ತುಂಬುವ ಕಾರ್ಯ ಮಾಡಿದ್ದಾರೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ‘ಮನೆ, ಶಾಲೆ ಮತ್ತು ಸಮಾಜವು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದಲ್ಲಿ ಕಲ್ಪಿಸಿಲ್ಲ. ಮಕ್ಕಳ ಸಾಹಿತ್ಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಪೂರಕ ಕಾರ್ಯಕ್ರಮಗಳನ್ನು ರೂಪಿಸಬೇಕು. ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುವ ಮೂಲಕ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ಸಾಹಿತಿ ರಾಮಚಂದ್ರ ಹಂಸನೂರ ಮಾತನಾಡಿ, ‘ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಪಠ್ಯ ಕಲಿಕೆಯ ಜತೆಗೆ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವ ಮೂಲಕ ಅವರ ಸೃಜನಶೀಲತೆಯನ್ನು ವಿಕಾಸಗೊಳಿಸುವ ಕಾರ್ಯ ಮಾಡಬೇಕು’ ಎಂದು ತಿಳಿಸಿದರು.

ಚಿನ್ನಮ್ಮ ವಸ್ತ್ರದ ವೇದಿಕೆಯಲ್ಲಿದ್ದರು. ರಕ್ಷಿತಾ ಗಿಡ್ನಂದಿ ನಿರೂಪಿಸಿದರು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ರಾಹುಲ ಗಿಡ್ನಂದಿ ವಂದಿಸಿದರು.

ಕೆ.ಎಚ್.ಬೇಲೂರ, ಅನ್ನದಾನಿ ಹಿರೇಮಠ, ಸಿ.ಕೆ.ಎಚ್.ಕಡಣಿ ಶಾಸ್ತ್ರಿ, ಅಂದಾನೆಪ್ಪ ವಿಭೂತಿ, ಕ್ಷಮಾ ವಸ್ತ್ರದ, ವಿನಯ ವಸ್ತ್ರದ, ಬಸವರಾಜ ಗಿರಿತಿಮ್ಮಣ್ಣವರ, ಬಿ.ಬಿ.ಹೊಳಗುಂದಿ, ಸಿ.ಎಂ.ಮಾರನಬಸರಿ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-23-1723459895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.