ಗದಗ: ‘ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಸರ್ಕಾರದ ಈ ಆಶಯವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ಶಿಕ್ಷಣ ಪಡೆದ ಪ್ರತಿಯೊಂದು ಮಗು ಕೂಡ ಮುಂದಿನ ಹಂತವಾಗಿ ಒಂದನೇ ತರಗತಿಗೆ ಸೇರ್ಪಡೆಯಾಗಿರುವುದನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

‘ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಸೌಲಭ್ಯಗಳಿಂದ ವಂಚಿತರಾಗಬಾರದು. ಶಾಲಾ ಶಿಕ್ಷಣ, ಪೌಷ್ಟಿಕ ಆಹಾರ, ವಿದ್ಯಾರ್ಥಿವೇತನ, ಆರೋಗ್ಯ ಸೇವೆಗಳು ಸೇರಿದಂತೆ ಸರ್ಕಾರ ನೀಡುವ ಸೌಲಭ್ಯಗಳು ಸಮರ್ಪಕವಾಗಿ ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಮಕ್ಕಳ ಶಿಕ್ಷಣದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಬಾರದು. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ದೂರವಾಗದಂತೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಸರ್ಕಾರದ ವಿವಿಧ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಉಳಿಯದೆ; ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದಕ್ಕಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಪೊಲೀಸ್ ವೃತ್ತಿ ಜೀವನದ ಆರಂಭವನ್ನು ಗದಗ ಜಿಲ್ಲೆಯ ನರಗುಂದದಲ್ಲಿ ಆರಂಭಿಸಿದ್ದನ್ನು ಸ್ಮರಿಸಿದ ಅವರು, ‘ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯಿಂದ ಏಪ್ರಿಲ್ 2025ರಿಂದ ಮಾರ್ಚ್ 2026ರ ಅಂತ್ಯದವರೆಗೆ ಸಮವಸ್ತ್ರ ಮತ್ತು ಶೂ ಮತ್ತು ಸಾಕ್ಸ್ ಯೋಜನೆಯಡಿ 14,794 ಫಲಾನುಭವಿಗಳು ಸೌಲಭ್ಯ ಪಡೆದಿರುತ್ತಾರೆ. ಅಕ್ಷರ ದಾಸೋಹ ಮತ್ತು ಕ್ಷೀರ ಭಾಗ್ಯ ಯೋಜನೆಯಡಿ 19,128 ಫಲಾನುಭವಿಗಳು ಸೌಲಭ್ಯ ಪಡೆದಿರುತ್ತಾರೆ ಎಂದು ಅಧಿಕಾರಿಗಳು ಸಭೆ ಮಾಹಿತಿ ನೀಡಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಏಪ್ರಿಲ್ 2025ರಿಂದ ಮಾರ್ಚ್ 2026ರ ಅಂತ್ಯದವರೆಗೆ 798 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿರುತ್ತಾರೆ. ಪ್ರಸಕ್ತ ಉದ್ಯೋಗ ಮೇಳದಲ್ಲಿ 8 ಜನ ಅಲ್ಪಸಂಖ್ಯಾತರು ಉದ್ಯೋಗ ಪಡೆದಿರುತ್ತಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ ಜಿ., ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಎಸ್.ಬುರುಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ್ ಬಿದರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ಒಎಸ್ಡಿ ಚೇರ್ಮನ್ ಮುಜಾಬುಲ್ಲಾ ಜಾಫರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-23-1221855299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.