ಗದಗ: ‘ಸಂಘ ಸಂಸ್ಥೆಗಳಿಗೆ 25ರ ಘಟ್ಟವು ಮಹತ್ವದ್ದಾಗಿದೆ. ಅದರ ಅಂಗವಾಗಿ ವರ್ಷಪೂರ್ತಿ ಕಾರ್ಯಕ್ರಮ ಆಯೋಜಿಸುವುದು ಮಾದರಿಯಾಗಲಿದೆ’ ಎಂದು ನಿವೃತ್ತ ನ್ಯಾಯಾಧೀಶ ಎಸ್.ಜಿ.ಪಲ್ಲೇದ ಹೇಳಿದರು.

ನಗರದ ದೇವರಾಜ ಅರಸು ಹಾಸ್ಟೆಲ್ ಆವರಣದಲ್ಲಿ ನಡೆದ ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಫಕೀರಪ್ಪ ಹೆಬಸೂರ ಮಾತನಾಡಿ, ‘ನಗರದ ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವ ಸಂಭ್ರಮವನ್ನು ವರ್ಷಪೂರ್ತಿ ಆಚರಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಅದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

‘ಇಂದಿನ ದಿನಗಳಲ್ಲಿ ಅನೇಕ ಸಂಸ್ಥೆಗಳು ವ್ಯಾಪಾರಕ್ಕೆ ನಿಂತಿವೆ. ಆದರೆ, ನಮ್ಮ ಶಿಕ್ಷಣ ಸಂಸ್ಥೆಗೆ ಮಕ್ಕಳ ಪಾಲಕರೇ ಆಧಾರಸ್ತಂಭಗಳಾಗಿದ್ದಾರೆ. ಅವರೆಲ್ಲರ ಆಶೀರ್ವಾದದಿಂದ ಸಂಸ್ಥೆಯು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ’ ಎಂದು ಹೇಳಿದರು.

ಕುರುಬ ಸಮಾಜದ ಮುಖಂಡ ಶಶಿಧರ ರೊಳ್ಳಿ ಮಾತನಾಡಿ, ‘ರಜತ ಮಹೋತ್ಸವದ ಅಂಗವಾಗಿ ನವೆಂಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಬರುವರು’ ಎಂದರು.

ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಮಾತನಾಡಿ, ‘ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಯೋಗ ದಿನಾಚರಣೆ ಮತ್ತು ಸಾವಯವ ಕೃಷಿ ಕುರಿತ ಕಾರ್ಯಕ್ರಮಕ್ಕೆ ಪತಂಜಲಿ ಯೋಗ ಸಮಿತಿಯಿಂದ ಸಹಕಾರ ಸಿಗಲಿದೆ. ಕನೇರಿ ಶ್ರೀಗಳನ್ನು ಕರೆಯಿಸುವ ಪ್ರಯತ್ನಕ್ಕೆ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.

ಡಾ.ಜಿ.ಬಿ.ಪಾಟೀಲ, ಡಾ.ಉಮೇಶ ಪುರದ, ಬಿಜೆಪಿ ಹಿರಿಯ ಮುಖಂಡ ಎಂ.ಎಸ್.ಕರಿಗೌಡ್ರ, ವಿಶ್ವಕರ್ಮ ಸಮಾಜದ ಮುಖಂಡ ಆರ್.ಡಿ. ಕಡ್ಲಿಕೊಪ್ಪ ಮಾತನಾಡಿದರು.

ಪ್ರಾಸ್ತಾವಿಕ ಮಾತನಾಡಿದ ನೀಲಕಂಠ ಮರುಡಿ, ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವದ ಅಂಗವಾಗಿ ಏಪ್ರಿಲ್ 18ರಂದು ಗಂಗಾವತಿಯ ಬಿ. ಪ್ರಾಣೇಶ ಅವರಿಂದ ಹಾಸ್ಯಸಂಜೆ ಹಮ್ಮಿಕೊಳ್ಳಲಾಗಿದೆ. ಮೇ ತಿಂಗಳಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ನಂತರ ವರ್ಷದುದ್ದಕ್ಕೂ ಪರಿಸರ ದಿನಾಚರಣೆ, ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಗುರುಪೂರ್ಣಿಮೆ, ಹಳೆ ವಿದ್ಯಾರ್ಥಿಗಳಿಂದ ಗುರು-ಶಿಷ್ಯರ ಸಮ್ಮೇಳನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುವುದು’ ಎಂದರು.

ಎಸ್.ಕೆ.ಮ್ಯಾಗೇರಿ, ಬಿ.ಬಿ.ಬಾವಿಕಟ್ಟಿ, ನಾಗಪ್ಪ ಗುಗ್ಗರಿ, ಶೇಖಣ್ಣ ಕಾಳೆ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-23-537268148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.