ಗದಗ: ‘ನ್ಯಾಯಾಂಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕೇವಲ ಪದವಿ ಸಾಕಾಗುವುದಿಲ್ಲ. ಕಾನೂನು ಜ್ಞಾನ, ವಾದ ಸಾಮರ್ಥ್ಯ, ನೈತಿಕತೆ ಮತ್ತು ಸಮಾಜದ ಮೇಲಿನ ಹೊಣೆಗಾರಿಕೆ ಅಗತ್ಯ’ ಎಂದು ರಾಜ್ಯ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ಬಿ.ಎ.ಪಾಟೀಲ ಹೇಳಿದರು.

ಗದಗ ನಗರದ ಕೆ.ಎಲ್.ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ಕೆಎಲ್ಇ ಕಾನೂನು ಅಕಾಡೆಮಿಯ 3ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಇಂದಿನ ದಿನಗಳಲ್ಲಿ ಕಾನೂನು ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚುತ್ತಿದೆ. ಕೇವಲ ಪದವಿ ಪಡೆದು ಯಶಸ್ವಿ ವಕೀಲರಾಗುವುದು ಸಾಧ್ಯವಿಲ್ಲ. ವಾಗ್ಮಿತೆ, ತಾರ್ಕಿಕ ಚಿಂತನೆ, ಆತ್ಮವಿಶ್ವಾಸ, ಸಂಶೋಧನಾ ಸಾಮರ್ಥ್ಯ ಹಾಗೂ ಕ್ಷಣಾರ್ಧದಲ್ಲಿ ಕಾನೂನು ಅಂಶಗಳನ್ನು ಮಂಡಿಸುವ ಕೌಶಲ ಅಗತ್ಯವಾಗಿದೆ. ಈ ಎಲ್ಲ ಗುಣಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯೇ ಅಣಕು ನ್ಯಾಯಾಲಯ. ವಿದ್ಯಾರ್ಥಿಗಳು ಇಲ್ಲಿ ಸೋಲು– ಗೆಲುವಿಗಿಂತ ಹೆಚ್ಚು ಅನುಭವವನ್ನು ಸಂಪಾದಿಸುತ್ತಾರೆ’ ಎಂದರು.

ರಾಜ್ಯ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ಉಮೇಶ್ ಅಡಿಗ ಮಾತನಾಡಿ, ‘ಅಣಕು ನ್ಯಾಯಾಲಯ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ನ್ಯಾಯಾಂಗದ ಬಗ್ಗೆ ಆತ್ಮವಿಶ್ವಾಸ ಬೆಳೆಸುವುದರ ಜೊತೆಗೆ ನ್ಯಾಯಾಲಯದ ಪ್ರಾಯೋಗಿಕ ಅನುಭವವನ್ನು ನೀಡುತ್ತವೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳನ್ನು ಭವಿಷ್ಯದ ಸಮರ್ಥ ವಕೀಲರು ಹಾಗೂ ನ್ಯಾಯಾಧೀಶರನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದರು.

ಗದಗ ಜಿಲ್ಲಾ ಗ್ರಾಹಕ ಪರಿಹಾರ ಆಯೋಗದ ಅಧ್ಯಕ್ಷ ಎಂ.ಐ. ಶಿಗ್ಲಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಕೆಎಲ್ಇ ಕಾನೂನು ಕಾಲೇಜಿನ ಪ್ರಾಚಾರ್ಯ ಜೆ.ಎಂ. ಮಲ್ಲಿಕಾರ್ಜುನಯ್ಯ ಮಾತನಾಡಿದರು. ಸ್ಥಾನಿಕ ಮಂಡಳಿಯ ಅಧ್ಯಕ್ಷ ಎಸ್.ಎ ಮಾನ್ವಿ, ಸದಸ್ಯರಾದ ಎಸ್.ಎಫ್. ಹಾದಿಮನಿ, ಎಸ್.ಜಿ. ಶಿಳ್ಳಿಕೇರಿ, ಎಸ್.ಎ ಮಾನ್ವಿ ಕಾನೂನು ಕಾಲೇಜಿನ ಪ್ರಾಚಾರ್ಯ ಸಂಜೀವ ಹುಲ್ಲೂರ, ಉಪನ್ಯಾಸಕರಾದ ವಿಜಯ ಮುರದಂಡೆ, ಶ್ರೀನಿವಾಸ ಪಾಲ್ಗೊಂಡ, ಜ್ಯೋತಿ ಸಿ.ವಿ, ಸಿ.ವಿ. ರಣಗಟ್ಟಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-1820430005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.