ಗದಗ: ಹುಲಕೋಟಿಯ ಆರ್ಟಿಇ ಸೊಸೈಟಿಯ ರೂರಲ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ‘ರೆಕಾನ್ 1.0’ ಸ್ಪರ್ಧೆ ಆಯೋಜಿಸಲಾಗಿದ್ದು, ಮೊದಲ ದಿನದ ಹ್ಯಾಕಥಾನ್ನಲ್ಲಿ 32 ತಂಡಗಳು ಭಾಗವಹಿಸಿದ್ದವು.

ರಾಜ್ಯದ ವಿವಿಧ ಜಿಲ್ಲೆಗಳ ಜೊತೆಗೆ ಹೊರ ರಾಜ್ಯದ ತಂಡಗಳು ವಿದ್ಯಾರ್ಥಿಗಳು ವೆಬ್ ಡೆವಲಪ್ಮೆಂಟ್ (ಫುಲ್ ಸ್ಟ್ಯಾಕ್) ಮತ್ತು ಕೃತಕ ಬುದ್ಧಿಮತ್ತೆ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಆಯೋಜಕರು ನೀಡಿದ ಸವಾಲಿನ, ನವೀನ ಮತ್ತು ನೈಜ ಜೀವನಾಧಾರಿತ ಸಮಸ್ಯೆಗಳ ಹೇಳಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ವಿಶ್ಲೇಷಣಾತ್ಮಕ ಚಿಂತನೆಗೆ ಉತ್ತೇಜನ ನೀಡಿದವು ಎಂದು ಆಯೋಜಕರು ತಿಳಿಸಿದ್ದಾರೆ.

ಡಾ. ಮಧುಸೂದನ್ ಬಿ.ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಆರ್ಟಿಇ ಸೊಸೈಟಿಯ ಕಾರ್ಯದರ್ಶಿ ಸಚಿನ್ ಡಿ. ಪಾಟೀಲ, ಪ್ರಾಂಶುಪಾಲ ಡಾ. ವಿ.ಎಂ.ಪಾಟೀಲ, ಡಾ. ಶರಣಬಸವರಾಜ ಅಂಗಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-23-1974300219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.