ಗದಗ: ನಗರದ ಎಸ್.ಎ.ಮಾನ್ವಿ ಕಾನೂನು ಮಹಾವಿದ್ಯಾಲಯದ ವತಿಯಿಂದ ಕೆಎಲ್ಇ ಕಾನೂನು ಅಕಾಡೆಮಿಯ ಮೂರನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ-2026 ಮೇ 22, 23 ಮತ್ತು 24ರಂದು ಜೆ.ಟಿ. ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಸಂಜೀವ ಹುಲ್ಲೂರ ಹೇಳಿದರು.

‘ಈ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಮತ್ತು ಕೌಶಲಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ. ಈ ವರ್ಷದ ಅಣಕು ನ್ಯಾಯಾಲಯ ಸ್ಪರ್ಧೆಯು ‘ಹಿಂದೂ ಕಾನೂನಿನ ದಾಂಪತ್ಯ ಹಕ್ಕುಗಳ ಮರುಸ್ಥಾಪನೆ’ ವಿಷಯ ಆಧರಿಸಿದೆ. ವಿವಿಧ ರಾಜ್ಯಗಳಿಂದ ಒಟ್ಟು 27 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಸುರೇಶ ನಾಡಗೌಡರ ಶುಕ್ರವಾರ ಸಂಜೆ 5ಕ್ಕೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸುವರು. ಡಾ. ಜಗದೀಶ ಎಸ್. ಹಾಲಶೆಟ್ಟಿ, ಜೆ.ಟಿ.ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಜಿ.ಪಾಟೀಲ ಅತಿಥಿಗಳಾಗಿ ಭಾಗವಹಿಸುವರು. ಎಸ್.ಎ.ಮಾನ್ವಿ ಕಾನೂನು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಸ್.ಎ. ಮಾನ್ವಿ ಅಧ್ಯಕ್ಷತೆ ವಹಿಸುವರು’ ಎಂದರು.

‘ಕಾನೂನು ವಿದ್ಯಾರ್ಥಿಗಳಿಗೆ ವಾದ ಮಂಡನೆ ಕೌಶಲ ಹಾಗೂ ಕಾನೂನು ಸಂಶೋಧನಾ ಸಾಮರ್ಥ್ಯವನ್ನು ವೃತ್ತಿಪರ ರೀತಿಯಲ್ಲಿ ಅಭಿವೃದ್ಧಿಪಡಿಸಲು ಅಣಕು ನ್ಯಾಯಾಲಯ ಅತ್ಯಂತ ಪರಿಣಾಮಕಾರಿ ವಿಧಾನವೆಂದು ಪರಿಗಣಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಾಥಮಿಕ ಸುತ್ತು, ಕ್ವಾರ್ಟರ್ ಫೈನಲ್, ಸೆಮಿ ಫೈನಲ್ ಹಾಗೂ ಅಂತಿಮ ಸುತ್ತು ನಡೆಯಲಿವೆ’ ಎಂದು ಹೇಳಿದರು.

‘ಮೇ 24ರಂದು ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ ಭಾಷಣ ಮಾಡುವರು. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಉಮೇಶ ಮಂಜುನಾಥಭಟ್ ಅಡಿಗ ಅತಿಥಿಯಾಗಿ ಭಾಗವಹಿಸುವರು. ಕಾನೂನು ಅಕಾಡೆಮಿ ನಿರ್ದೇಶಕ ಡಾ. ಜಿ.ಎಂ.ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸುವರು. ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಬಿ.ಜಿ.ಶೆಲ್ಲಿಕೇರಿ ಹಾಗೂ ಎಸ್.ಎಫ್.ಹಾದಿಮನಿ ಸೇರಿದಂತೆ ಹಲವರು ಉಪಸ್ಥಿತರಿರುವರು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-23-593310877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.