ಗದಗ: ಡಾ. ಎನ್.ವಿ. ಬದಿ ಎಜ್ಯುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ಕೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಎಸ್ಎಸ್ಕೆ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಜೂನ್ 7ರಂದು ಬೆಳಿಗ್ಗೆ 10ಕ್ಕೆ ಬೆಟಗೇರಿಯ ಅಂಬಾಭವಾನಿ ದೇವಸ್ಥಾನದ ಮುನ್ನುಬಾಯಿ ಈಶ್ವರಸ ಖೋಡೆ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು.

2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಶೇ 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು.

ಇದೇ ವೇಳೆ, 2025-26ನೇ ಸಾಲಿನಲ್ಲಿ ಬಿಇ, ಎಂಬಿಬಿಎಸ್, ಸಿಎ, ಬಿಎ, ಬಿ.ಎಸ್ಸಿ ಮತ್ತು ಬಿ.ಕಾಂ ಪದವಿ ಕೋರ್ಸ್ಗಳ ಮೊದಲ ಸೆಮಿಸ್ಟರ್ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಯುಪಿಎಸ್ಸಿ ಸ್ಪರ್ಧಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು.

ಅರ್ಹ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳೊಂದಿಗೆ ಸಂಪರ್ಕ ಸಂಖ್ಯೆ ಸಹಿತವಾಗಿ ಅರ್ಜಿಗಳನ್ನು ಮೇ 29ರೊಳಗೆ ಬೆಟಗೇರಿಯ ಅಂಬಾಭವಾನಿ ದೇವಸ್ಥಾನದ ಕಚೇರಿಗೆ ಸಲ್ಲಿಸಬೇಕು ಎಂದು ಎಸ್ಎಸ್ಕೆ ಸಮಾಜದ ಅಧ್ಯಕ್ಷ ಲೋಕನಾಥ ಬಿ. ಕಬಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-602981517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.