ಗದಗ: ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದೀಗ ಪಿ.ಎಂ.ಶ್ರೀ ಶಾಲೆಗಳಿಗೂ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಿರುವುದು ಖಂಡನೀಯ’ ಎಂದು ಎಐಡಿಎಸ್ಒಜಿಲ್ಲಾ ಸಂಚಾಲಕಿ ಎಂ. ಶಾಂತಿ ಹೇಳಿದ್ದಾರೆ.

‘ಸರ್ಕಾರ ಪಿ.ಎಂ. ಶ್ರೀ ಯೋಜನೆಯ ಹೆಸರಿನಲ್ಲಿ ರಾಜ್ಯದಾದ್ಯಂತ 317 ಶಾಲೆಗಳನ್ನು ವಿಲೀನ ಮಾಡಿಸಲು ಆದೇಶ ಹೊರಡಿಸಿದೆ. ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ. ಶಿಕ್ಷಣಕ್ಕೆ 8 ಗ್ಯಾರಂಟಿಗಳನ್ನು ನೀಡಿ ದೇಶದಲ್ಲೇ ಮಾದರಿ ಶಾಲಾ ವ್ಯವಸ್ಥೆ ನಿರ್ಮಿಸುತ್ತೇವೆ ಎಂದು ಸರ್ಕಾರವು ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಈ ಗ್ಯಾರಂಟಿಗಳು ಮೋಸದಿಂದ ಕೂಡಿವೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಂಶವನ್ನು ನಯವಾಗಿ ತಳ್ಳಿ ಹಾಕುತ್ತಾ ಗ್ಯಾರಂಟಿಗಳ ಮುಖವಾಡದಲ್ಲಿ ನಾಡಿನ ಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮೋಸ ಮಾಡುತ್ತಿದೆ’ ಎಂದು ಅವರು ಟೀಕಿಸಿದ್ದಾರೆ.

‘ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಅನೇಕ ಹಳ್ಳಿಗಳ ಶಾಲೆಗಳನ್ನು ವಿಲೀನಗೊಳಿಸುವ ಅಧಿಕೃತ ಪಟ್ಟಿ ಈಗಾಗಲೇ ಹೊರಬಿದ್ದಿದ್ದು, ಗ್ರಾಮಸ್ಥರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಹಳ್ಳಕಟ್ಟೆ ಶಾಲೆಯ 58 ಮಕ್ಕಳನ್ನು, ಎಂವಿ ಹಟ್ಟಿಯ 28 ಮಕ್ಕಳನ್ನು, ಹಿರೇ ಸಾದರಹಳ್ಳಿಯ 34 ಮಕ್ಕಳನ್ನು ಹೊಳಲ್ಕೆರೆಯ 40 ಮಕ್ಕಳನ್ನು ಹೀಗೆ 15 ಹಳ್ಳಿಗಳಲ್ಲಿ ಓದುತ್ತಿರುವ 305 ಮಕ್ಕಳನ್ನು ಡಿ.ಎಂ.ಕುರ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಪೋಷಕರು, ಗ್ರಾಮಸ್ಥರು, ಎಸ್.ಡಿ.ಎಂ.ಸಿ ಸದಸ್ಯರು ಇದನ್ನು ವಿರೋಧಿಸಿ ಬಿಇಒ ಹಾಗೂ ಸರ್ಕಾರಕ್ಕೆ ನಮ್ಮ ಮಕ್ಕಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸುವುದಿಲ್ಲ ನಮ್ಮ ಊರಿನಲ್ಲೇ ನಮ್ಮೂರ ಶಾಲೆ ಉಳಿಯಲಿ ಎಂದು ಪತ್ರ ಬರೆದಿದ್ದಾರೆ. ಹಾಗಾಗಿ, ರಾಜ್ಯ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-23-812020380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.