ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2026-27ನೇ ಸಾಲಿನ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಶಾಸ್ತ್ರೀಯ ಸಂಗೀತ, ಕರಾಟೆ, ಯೋಗ, ಕಸದಿಂದ ರಸ, ಜುವೆಲರಿ ಮೇಕಿಂಗ್, ಮೆಹಂದಿ ಮತ್ತು ಗ್ರಾಮಿಣ ಕ್ರೀಡೆಗಳನ್ನು ಹೇಳಿಕೊಡಲಾಗುವುದು.

5ರಿಂದ 16ವರ್ಷದೊಳಗಿನ ಮಕ್ಕಳಿಗೆ ಶಿಬಿರದಲ್ಲಿ ಭಾಗವಹಿಸುವ ಅವಕಾಶವಿದೆ. ಸರ್ಕಾರಿ ಶಾಲಾ ಮಕ್ಕಳು, ಗ್ರಾಮಿಣ ಪ್ರದೇಶ ಹಾಗೂ ಸೌಲಭ್ಯವಂಚಿತ ಮಕ್ಕಳು, ಅಂಗವಿಕಲ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಶಿಬಿರದ ಅವಧಿಯಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆ ಹಾಗೂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ 50ರಿಂದ 60 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.

ಏ.18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಶಿಬಿರ ಪ್ರಾರಂಭಿಸುವ ದಿನಾಂಕವನ್ನು ದೂರವಾಣಿ, ವಾಟ್ಸ್ಆ್ಯಪ್ ಸಂದೇಶದ ಮುಖಾಂತರ ತಿಳಿಸಲಾಗುವುದು.

ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜಕ ರವಿ ಎಫ್.ಉಮಚಗಿ ಅವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-23-1839401197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.