ಗದಗ: ‘ಚರ್ಮರೋಗ, ಸಕ್ಕರೆ ಕಾಯಿಲೆ ಮತ್ತು ಸ್ತನ ಕ್ಯಾನ್ಸರ್ ಕುರಿತು ಮಹಿಳೆಯರು ತಿಳಿವಳಿಕೆ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ. ಜನರಲ್ಲಿ ಅರಿವಿನ ಕೊರತೆಯಿಂದಾಗಿ ಈ ಕಾಯಿಲೆಗಳು ಗಂಭೀರ ರೂಪ ಪಡೆದುಕೊಳ್ಳುತ್ತಿವೆ’ ಎಂದು ಡಾ. ರಚನಾ ದಾಡಿಬಾವಿ ಹೇಳಿದರು.

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದಿಂದ ಲಿಂ. ಈರಮ್ಮ ಚಂದ್ರೇಶೇಖರಯ್ಯ ಧನ್ನೂರಹಿರೇಮಠ ಸ್ಮರಣಾರ್ಥ ಆಯೋಜಿಸಿದ್ದ ದತ್ತಿ ಉಪನ್ಯಾಸದಲ್ಲಿ ಮಾತನಾಡಿದರು.

‘ಚರ್ಮರೋಗಗಳು ಅಂದರೆ ಬ್ಯಾಕ್ಟೀರಿಯಾ, ವೈರಸ್, ಫಂಗಸ್ ಮತ್ತು ಇತರ ಸೂಕ್ಷ್ಮಾಣುಗಳಿಂದ ಉಂಟಾಗುತ್ತವೆ. ಸಾಮಾನ್ಯವಾಗಿ ಸ್ವಚ್ಛತೆ ಕೊರತೆಯಿಂದ ಹರಡುತ್ತವೆ’ ಎಂದರು.

ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜನರಲ್ ಮೆಡಿಸಿನ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸ್ನೇಹಾ ಪಾಟೀಲ ಮಾತನಾಡಿ, ಸಕ್ಕರೆ ಕಾಯಿಲೆ ಇಂದಿನ ಕಾಲದಲ್ಲಿ ಸಾಮಾನ್ಯವಾಗಿ ಕಂಡುಬರುವ ದೀರ್ಘಕಾಲಿಕ ರೋಗವಾಗಿದೆ. ದೇಹದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗುವುದು ಅಥವಾ ಸರಿಯಾಗಿ ಕೆಲಸ ಮಾಡದಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ತಿಳಿಸಿದರು.

‘ಸಕ್ಕರೆ ಕಾಯಿಲೆಯ ಲಕ್ಷಣಗಳಲ್ಲಿ ಹೆಚ್ಚು ದಾಹ, ಹೆಚ್ಚು ಮೂತ್ರವಿಸರ್ಜನೆ ತೂಕ ಇಳಿಕೆಯಾಗುವುದು ದಣಿವು ಇತ್ಯಾದಿ ಸೇರಿವೆ. ಈ ಲಕ್ಷಣಗಳನ್ನು ಗಮನಿಸಿ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ’ ಎಂದರು.

‘ಮಹಿಳೆಯಲ್ಲಿ ಸ್ತನ ಕ್ಯಾನ್ಸರ್ ಒಂದು ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ಇದು ಸ್ತನದಲ್ಲಿ ಅಸಾಮಾನ್ಯ ಕೋಶಗಳ ಬೆಳವಣಿಗೆಯಿಂದ ಉಂಟಾಗುತ್ತದೆ. ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಚಿಕಿತ್ಸೆ ಸಾಧ್ಯವಾಗುತ್ತದೆ. ಸ್ತನ ಕ್ಯಾನ್ಸರ್ ತಡೆಯಲು ಆರೋಗ್ಯಕರ ಜೀವನ ಶೈಲಿ ಅನುಸರಿಸುವುದು ಮುಖ್ಯ’ ಎಂದು ತಿಳಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ರಾಮನಗೌಡ ದಾನಪ್ಪಗೌಡ್ರ ಮಾತನಾಡಿ, ‘ಸಕ್ಕರೆ ಕಾಯಿಲೆ ಮತ್ತು ಸ್ತನ ಕ್ಯಾನ್ಸರ್ ಹಾಗೂ ಚರ್ಮರೋಗದಿಂದ ಸಾಕಷ್ಟು ಮಹಿಳೆಯರು ತೊಂದರೆಯನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವುದು ಅತಿ ಮುಖ್ಯವಾಗಿದೆ’ ಎಂದರು.

ಸುಷ್ಮಾ ಎಸ್. ಜಾಲಿ ಪ್ರಾರ್ಥನೆ ಹಾಡಿದರು. ನಂದಾ ಚಂದ್ರು ಬಾಳಿಹಳ್ಳಿಮಠ ಅತಿಥಿಗಳನ್ನು ಪರಿಚಯಿಸಿದರು. ಪೂರ್ಣಿಮಾ ಕೆ. ಆಟದ ನಿರೂಪಿಸಿದರು. ರೇಣುಕಾ ಲಿಂಗರಾಜ ಅಮಾತ್ಯ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-23-1471052667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.