ಗಂಗಾವತಿ: ‘ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಜಯಂತಿ ನಿಮಿತ್ತ ಏ.6ರಂದು ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ’ ಎಂದು ದಲಿತ ಸೇನೆ ಸಂಘಟನೆ ಜಿಲ್ಲಾಧ್ಯಕ್ಷ ಉಡಚಪ್ಪ ಹೇಳಿದರು.

ನಗರದಲ್ಲಿ ಈಚೆಗೆ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರವೇಶ ಶುಲ್ಕ ₹50 ಪಾವತಿಸಿ ಏ.1ರ ಒಳಗಾಗಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಮೊದಲ ಹೆಸರು ನೋಂದಾಯಿಸಿಕೊಂಡ 150 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ. ಪ್ರಥಮ ₹20 ಸಾವಿರ, ದ್ವೀತಿಯ ₹10 ಸಾವಿರ, ತೃತೀಯ ₹5 ಸಾವಿರ ಬಹುಮಾನ ನೀಡುವ ಜತೆಗೆ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಗುತ್ತದೆ’ ಎಂದರು.

‘ಬಹುಆಯ್ಕೆಯ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಋಣಾತ್ಮಕ ಅಂಕಗಳಿರುವುದಿಲ್ಲ. ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಮತ್ತು ಭಾರತ ಸಂವಿಧಾನದ ಪಠ್ಯದ ಮೇಲೆ ಪ್ರಶ್ನೆಗಳು ಇರಲಿವೆ. ಪಿಯುಸಿಯಿಂದ ಸ್ನಾತಕೋತ್ತರ ಪದವಿಯವರೆಗೆ ಎಲ್ಲ ವಿದ್ಯಾರ್ಥಿಗಳು ಬರೆಯಬಹುದು. ಹೆಸರು ನೋಂದಾಯಿಸಿಕೊಳ್ಳಲು 7899731214, 9731096754, 9483588758 ಸಂಪರ್ಕಿಸಬಹುದು’ ಎಂದು ಹೇಳಿದರು.

ದಲಿತ ಸೇನೆ ಸಂಘಟನೆ ಸದಸ್ಯ ಮೌಲಾಲಿ.ಕೆ, ಪರಶುರಾಮ, ನೂಶಪ್ಪ, ಮಾಲಪ್ಪ, ಗಣೇಶ, ದುರುಗಪ್ಪ, ಶಿವಕುಮಾರ, ರಾಘವೇಂದ್ರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-35-54046728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.