ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆವೆನ್ತ್ ಸೆನ್ಸ್ ಪೀಪಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸಿಎನ್ಆರ್ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹಯೋಗದಲ್ಲಿ ಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪ್ರಮಾಣಪತ್ರ ಆಧಾರಿತ ಕೋರ್ಸ್ ಕಲಿಕೆಗೆ ಆನ್ಲೈನ್ ಮೂಲಕ ಒಪ್ಪಂದ ಮಾಡಿಕೊಳ್ಳಲಾಯಿತು.

ಈ ಕಾರ್ಯಕ್ರಮವು ಸಂಪೂರ್ಣ ಆನ್ಲೈನ್ ಕೋರ್ಸ್ ಆಗಿದ್ದು ವಿದ್ಯಾರ್ಥಿಗಳು ಎರಡು ತಿಂಗಳ ಕಾಲ ವ್ಯಾಸಂಗ ಮಾಡಿ ಪ್ರಮಾಣಪತ್ರ ಪಡೆಯಬಹುದಾಗಿದೆ. ಬೆಂಗಳೂರಿನ ತರಬೇತುದಾರರಾದ ಪಲ್ಲವಿ ತರಬೇತಿಯ ಕಾರ್ಯವಿಧಾನ, ನೋಂದಣಿ ಮತ್ತು ನಿಯಮಗಳ ಕುರಿತು ಮಾರ್ಗದರ್ಶನ ಮಾಡಿದರು.

ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಸರಫರಾಜ್ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ ‘ವಿಶೇಷ ಕೋರ್ಸ್ ಕಲಿಯುವುದರಿಂದ ವಿದ್ಯಾರ್ಥಿಗಳ ಬದುಕಿಗೆ ಅನುಕೂಲವಾಗುತ್ತದೆ’ ಎಂದರು. ಪ್ರಾಚಾರ್ಯ ಪ್ರೊ. ಕರಿಗೂಳಿ, ಸಹಾಯಕ ಪ್ರಾಧ್ಯಾಪಕರಾದ ವೀರೇಶ, ರವಿಕುಮಾರ, ವಿರೂಪಾಕ್ಷ, ಶಶಿಕುಮಾರ್, ಶಂಕ್ರಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-35-1533449922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.