ಗಂಗಾವತಿ: ವಿದ್ಯಾರ್ಥಿ ಜೀವನದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ತುಂಬ ಮುಖ್ಯ. ಪಠ್ಯ ಉಜ್ವಲ ಭವಿಷ್ಯ ರೂಪಿಸಿದರೆ, ಪಠ್ಯೇತರ ಚಟುವಟಿಕೆ ಬದುಕಿನ ಮೌಲ್ಯ, ಸದೃಢ ದೇಹ, ಸಾಧಿಸುವ ಛಲ ನೀಡುತ್ತದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್ ಶ್ರೀನಾಥ ಹೇಳಿದರು.

ನಗರದ ಎಚ್.ಆರ್. ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

‘ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಿರಂತರವಾಗಿ ನಡೆಯುವುದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗುತ್ತಾರೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ದೃಢತೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯ. ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತವೆ’ ಎಂದು ಹೇಳಿದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ಸೋಮರಾಜು ಮಾತನಾಡಿ, ‘ಕ್ರೀಡೆ ಇಲ್ಲದ ಜೀವನ, ಕೀಟ ತಿಂದ ಹಣ್ಣಿನಂತೆ. ಕ್ರೀಡಾಪಟುಗಳು ಸೋಲು-ಗೆಲುವು ಎರಡನ್ನು ಸಮನಾಗಿ ಸ್ವೀಕರಿಸಬೇಕು. ನಿರಂತರ ಅಭ್ಯಾಸ ಮತ್ತು ತರಬೇತಿಯಿಂದ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯ’ ಎಂದು ಹೇಳಿದರು. ಕಾಲೇಜಿನ ಪ್ರಾಚಾರ್ಯ ವಿಜಯಾನಂದ ಅ. ವಗ್ಗಿ, ದೈಹಿಕ ಶಿಕ್ಷಣ ನಿರ್ದೇಶಕ ಮೋಹನ್ ಹೊಸಕೋಟೆ ಅವರು ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಸ್ಥೆಯ ಖಜಾಂಚಿ ಬದರಿನಾರಾಯಣ, ಸದಸ್ಯ ಜೆ.ನಾಗರಾಜ, ಸುಬ್ರಮಣ್ಯ ಭಟ್ರಾಯರ್, ಹನುಮಂತಪ್ಪ ನಾಯಕ, ಸತೀಶ ಕೊಂತಮ, ಪ್ರವೀಣ ಚಿತ್ರಗಾರ, ಪ್ರೊ. ರವಿ ಸೇರಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-35-1211960485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.