ಗಂಗಾವತಿ: ‘ವಿದ್ಯಾರ್ಥಿಗಳಲ್ಲಿ ಸಾಧಕರ ಕುರಿತು ಜ್ಞಾನ ಹೆಚ್ಚಿಸಿ, ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಡಾ.ಅಂಬೇಡ್ಕರ್, ಬಾಬು ಜಗಜೀವನ್ ರಾಂ ಕುರಿತು ದಲಿತ ಸೇನೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯ ಶ್ಲಾಘನೀಯ’ ಎಂದು ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡ ಹೇಳಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ದಲಿತ ಸೇನೆ ಸಂಘಟನೆಯಿಂದ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಜಯಂತಿ ನಿಮಿತ್ತ ನಡೆದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಡಾ.ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿವೆ’ ಎಂದು ಹೇಳಿದರು.

ದಲಿತ ಸೇನೆ ಜಿಲ್ಲಾಧ್ಯಕ್ಷ ಉಡಚಪ್ಪ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಮಹಾನ್ ನಾಯಕರ ಜೀವನ ಮನ ದಟ್ಟು ಮಾಡುವ ಉದ್ದೇಶದಿಂದ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ’ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿ ಆಂಜನೇಯ ಬಂಕಾಪುರ(ಪ್ರಥಮ), ಸುಂಕಪ್ಪ ವೆಂಕಟಗಿರಿ(ದ್ವಿತೀಯ), ಮುತ್ತಣ್ಣ ಪೂಜಾರಿ ಕುಷ್ಟಗಿ ತೃತೀಯ ಸ್ಥಾನ ಪಡೆದರು. ಮರಿಯಪ್ಪ ಕುಕನೂರ, ಶಿವಕುಮಾರ ಯಲಬುರ್ಗಾ ಸಮಾಧಾನಕರ ಬಹುಮಾನ ಪಡೆದರು. ಸ್ಪರ್ಧೆಯಲ್ಲಿ 200 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ವಿಜೇತರಿಗೆ ಕಾರಟಗಿಯಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸುಲಾಗುವುದು. ಇದಕ್ಕೂ ಮೊದಲು ಡಾ.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಮೇಶ ಕಪೂರ, ಪ್ರಾಚಾರ್ಯ ಕರಿ ಗೂಳಿ, ಕೆ.ಪವನ, ವಕೀಲ ಶಿವರಾಜ ಸೇರಿ ತಾಲ್ಲೂಕು ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-35-999618947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.