ಗಂಗಾವತಿ: ‘ಸಂವಿಧಾನವು ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿಕೊಟ್ಟಿದೆ. ಸಂವಿಧಾನದಡಿ ಸಿಗುವ ಎಲ್ಲ ಸೌಲಭ್ಯಗಳನ್ನು ಮಹಿಳೆಯರು ಸದೂಪಯೋಗ ಪಡಿಸಿಕೊಳ್ಳಬೇಕು’ ಎಂದು ಸಿವಿಲ್ ನ್ಯಾಯಾಧೀಶೆ ಸವಿತಾ ಹೇಳಿದರು.

ನಗರದ ಎಸ್ಕೆಎನ್ಜಿ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಸಂವಿಧಾನದ 15 ಮತ್ತು 16ನೇ ವಿಧಿಗಳು ಸಮಾನತೆ ಜೊತೆಗೆ ಸಮಾನ ಅವಕಾಶಗಳು ನೀಡಲು ಹೇಳುತ್ತಿದೆ. ಮಹಿಳೆಯರಿಗೆ ಸಮಾನ ಆಸ್ತಿ ಹಕ್ಕು, ವರದಕ್ಷಿಣೆ ನಿಷೇಧ ಕಾಯ್ದೆ, ಉದ್ಯೋಗಸ್ಥ ಮಹಿಳೆಯರ ಹೆರಿಗೆ ನಂತರದ ರಜೆ, ಕೌಟುಂಬಿಕ ದೌರ್ಜನ್ಯ ವಿರೋಧಿ ಕಾಯ್ದೆ ಹೀಗೆ ಅನೇಕ ಕಾಯ್ದೆಗಳಿವೆ’ ಎಂದು ತಿಳಿಸಿದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮಮ್ತಾಜ ಬೇಗಂ ಮಾತನಾಡಿ, ‘ಮಹಿಳೆಯರು ಇಂದಿಗೂ ದ್ವಿತಿಯ ದರ್ಜೆಯ ನಾಗರಿಕರಾಗಿದ್ದಾರೆ. ಅಸಂಘಟಿತ ವಲಯದ ಮಹಿಳೆಯರಿಗೆ ಸರಿಯಾದ ಅವಕಾಶ, ಸಮಾನತೆ ಸಿಕ್ಕಾಗಲೇ ಮಹಿಳಾ ದಿನಾಚರಣೆಗೆ ಮಹತ್ವ ಬರುತ್ತದೆ. ಸರ್ಕಾರ ಮಹಿಳೆಯರಿಗೆ ವಿಶೇಷ ಯೋಜನೆ, ಅನುದಾನ ನೀಡಬೇಕು’ ಎಂದರು.

ಕಾರ್ಯಕ್ರಮ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿನ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಿವಿಲ್ ನ್ಯಾಯಾಧೀಶೆ ಸವಿತಾ ಅವರನ್ನು ಸನ್ಮಾನಿಸಲಾಯಿತು.

ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯೆ ಸುಧಾ ಮಂಜುನಾಥ, ಸೋಮಶೇಖರ ಕಂಪ್ಲಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಶಿವರಾಜ ಗುರಿಕಾರ, ಐಕ್ಯೂಎಸಿ ಸಂಚಾಲಕ ಮಂಜುನಾಥ ಕೆ.ಎಚ್. ದೀಪಕ್ ಬಾಂಟಿಯಾ, ಅಣ್ಣೋ ಜಿರೆಡ್ಡಿ, ಮೆಹತಾಬ್ ಅಂಜುಮ್, ಅನಿತಾ ಕೆ.ಎಂ, ಕಾದಂಬರಿ, ಸುಮಲತಾ.ಎಸ್., ಭೂಮಿಕಾ, ನಯನ.ಎಸ್, ಭವಾನಿ, ಪ್ರತಿಭಾ ಮುದಗಲ್ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-35-1160859193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.