ಗೋಕಾಕ: ಮತ್ತೊಬ್ಬರ ಕುರಿತು ಸಹನೆ ಮತ್ತು ಅತ್ಯಂತ ಕಳವಳ ವ್ಯಕ್ತಪಡಿಸುವ ಜೀವವೇ ಮಹಿಳೆ ಎಂದು ಇಲ್ಲಿನ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ಚೈತ್ರಾ ಕುಲಕರ್ಣಿ ಅರ್ಥೈಸಿದರು.

ಶುಕ್ರವಾರ ಸಂಜೆ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ವಕೀಲರ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯನ್ನು ಪುರುಷರೊಂದಿಗೆ ಹೋಲಿಕೆ ಮಾಡಿದಾಗ ಅವಳು ನೈಸರ್ಗಿಕ ಕಾರಣಗಳಿಂದಾಗಿ ದುರ್ಬಲಳೇ ಹೊರತು ಮತ್ಯಾವುದೇ ಕಾರಣಗಳಿಂದಲ್ಲ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಮಹಾದೇವ ಕಾನಟ್ಟಿ, ವಿವೇಕ ಜಾಗೃತ ಬಳಗದ ದಕ್ಷ ಸುಜಾತಾ ರಾಮಕೃಷ್ಣ, ಡಾ. ಕೀರ್ತಿ ಬೀರನಗಡ್ಡಿ ಮತ್ತು ವಕೀಲರ ಸಂಘದ ಅಧ್ಯಕ್ಷ ಎಸ್.ಜಿ. ಬಿ.ಪಾಟೀಲ ಮಾತನಾಡಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ನೆನಪಿನ ಕಾಣಿಕೆ ವಿತರಿಸಲಾ ಯಿತು. ವೇದಿಕೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ವಿ.ವೈ.ಜಾಗನೂರ, ವಿ.ಬಿ.ಮೆಳವಂಕಿ. ಎ.ಬಿ. ಖಂಡ್ರಟ್ಟಿ, ಬಿ.ಐ.ವಡೇರಹಟ್ಟಿ, ವಿ.ಜಿ.ಸಿದ್ಧಾಪೂರಮಠ ಮತ್ತಿತರರು ಇದ್ದರು.

ಆರತಿ ನಾಡಗೌಡ ಹಾಗೂ ಬಳಗದವರು ಪ್ರಾರ್ಥಿಸಿದರು. ಸಂಗೀತಾ ಬನ್ನೂ ಪ್ರಾಸ್ತಾವಿಕ ಮಾತನಾಡಿದರು. ಶಂಕರ ಗೋರೋಶಿ ಸ್ವಾಗತಿಸಿದರು. ಪ್ರತಿಭಾ ನಿಂಬಾಳ್ಕರ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-21-1907851997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.