ಗೋಕಾಕ: ಸತ್ಯ, ನಿಷ್ಠೆ, ಪ್ರಾಮಾಣಿಕತೆ ಹಾಗೂ ನಿರಂತರ ಪ್ರಯತ್ನವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಲಗಿಯ ಎಸ್.ಎ. ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎನ್. ಮಾವಿನಕಟ್ಟಿ ಕಿವಿಮಾತು ಹೇಳಿದರು.

ತಾಲ್ಲೂಕಿನ ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿ.ಎ. ಅಂತಿಮ ವಷ೯ದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮ ಹಾಗೂ ತಮ್ಮ ಸೇವಾ ನಿವೃತ್ತಿಯ ಸಮಾರಂಭದಲ್ಲಿ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಜಿಲ್ಲಾ ಯೋಜನಾ ಸಂಯೋಜಕ ಕೆ.ಎಸ್. ನಂದೇರ ಮಾತನಾಡಿದರು. ಪ್ರಾಚಾರ್ಯರಾಗಿ ನೇಮಕಗೊಂಡ ಪ್ರೊ. ಎಂ.ಎಂ.ನರಸಿಂಗೋಳ ಅವರನ್ನು ಸತ್ಕರಿಸಿ, ಅಧಿಕಾರ ಹಸ್ತಾಂತರಿಸಲಾಯಿತು.

ಪ್ರಾಧ್ಯಾಪಕ ಪ್ರೊ. ಪಿ. ಎ. ಕುರುಪಿ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಗುರುಗಳಾದ ಬಿ.ಬಿ.ಪಾಟೀಲ, ಎನ್. ಆರ್. ಪಾಟೀಲ, ಎಸ್.ಆರ್. ಮುದ್ದಾರ, ಐ.ಎಸ್. ಪಾಟೀಲ, ಬಿ.ಬಿ. ನಿವಾ೯ಣಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-1152683479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.